ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕಾಂಗ್ರೆಸ್ ನಾಯಕರಿಗೆ ಆಪರೇಷನ್ ಕಮಲದ ಆತಂಕ (Congress | Bjp | Yeddi)
Bookmark and Share Feedback Print
 
ವಿಶ್ವಾಸ ಮತಯಾಚನೆಯ ನಂತರ ತವರಿಗೆ ಮರಳಿದ ಕಾಂಗ್ರೆಸ್ ನಾಯಕರಿಗೆ ಆಪರೇಷನ್ ಕಮಲದ ಆತಂಕ ಎದುರಾಗಿದೆ ಎಂದು ಮೂಲಗಳು ತಿಳಿಸಿವೆ.

ಸೋಮವಾರದಂದು ಹೈಕೋರ್ಟ್ ತೀರ್ಪು ನೀಡಲಿರುವ ಹಿನ್ನೆಲೆಯಲ್ಲಿ, ಬಿಜೆಪಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಬೃಹತ್ ಪ್ರಮಾಣದ ಆಪರೇಷನ್ ಕಮಲ ನಡೆಸುವ ಸಾಧ್ಯತೆಗಳಿವೆ ಎಂದು ಪಕ್ಷದ ಮುಖಂಡರು ಆತಂಕ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿರುವ ಲಿಂಗಾಯಿತ ಶಾಸಕರಿಗೆ ಬಿಜೆಪಿ ಗಾಳ ಹಾಕುವ ಸಾಧ್ಯತೆಗಳಿವೆ ಎನ್ನುವ ವರದಿಗಳ ಹಿನ್ನೆಲೆಯಲ್ಲಿ, ಲಿಂಗಾಯಿತ ಶಾಸಕರ ಮೇಲೆ ಹದ್ದಿನ ಕಣ್ಣಿಡಲಾಗಿದೆ, ಆರ್ಥಿಕವಾಗಿ ದುರ್ಬಲವಾಗಿರುವ ಸಾಲದ ಸುಳಿಯಲ್ಲಿ ಸಿಲುಕಿರುವ ಶಾಸಕರಿಗೆ ಬಿಜೆಪಿ ಒಲವು ತೋರುತ್ತಿದೆ ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರಕಾರ, ಅಧಿಕಾರದಲ್ಲಿ ಮುಂದುವರಿಯಲು ಅನೈತಿಕವಾಗಿ ಯಾವುದೇ ಮಾರ್ಗವನ್ನು ಅನುಸರಿಸಲು ಸಿದ್ಧವಾಗಿದೆ ಎಂದು ಕಾಂಗ್ರೆಸ್‌ನ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಆರೋಪಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ