ಉಪಮುಖ್ಯಮಂತ್ರಿ ಹುದ್ದೆ ನೀಡುವಂತೆ ರೆಡ್ಡಿ ಸಹೋದರರು, ಮುಖ್ಯಮಂತ್ರಿಯವರಿಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ ಎನ್ನುವ ವರದಿಗಳು ರಾಜ್ಯ ರಾಜಕೀಯ ವಲಯದಲ್ಲಿ ಕೋಲಾಹಲ ಸೃಷ್ಟಿಸಿವೆ.
ದಸರಾ ಹಬ್ಬದ ನಂತರ ಸಚಿವ ಸಂಪುಟದ ಪುನರ್‌ರಚನೆಗಾಗಿ ಕೆಲ ಸಚಿವರನ್ನು ಕೈ ಬಿಟ್ಟು, ನೂತನ ಸಚಿವರನ್ನು ಸಂಪುಟಕ್ಕೆ ತೆಗೆದುಕೊಳ್ಳಲು ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ನಿರ್ಧರಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಕಳೆದ ಕೆಲವು ದಿನಗಳ ಹಿಂದೆ ತಮ್ಮ ವಿರುದ್ಧ ಬಂಡಾಯವೆದ್ದ ಶಾಸಕರನ್ನು ಅನರ್ಹಗೊಳಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ,ಕನಿಷ್ಠ 10 ಹೊಸ ಶಾಸಕರಿಗೆ ಸಚಿವ ಸ್ಥಾನ ನೀಡಲು ತಂತ್ರ ರೂಪಿಸಿದ್ದಾರೆ ಎಂದು ಪಕ್ಷದ ಆತ್ಮಿಯ ಮೂಲಗಳು ತಿಳಿಸಿವೆ.
ಇತ್ತಿಚಿನ ಬಿಕ್ಕಟ್ಟಿನ ಸಂದರ್ಭದಲ್ಲಿ ಮುಖ್ಯಮಂತ್ರಿಯನ್ನು ಬೆಂಬಲಿಸಿದ ರೆಡ್ಡಿ ಸಹೋದರರು, ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಪಕ್ಷದ ವಲಯದಲ್ಲಿ ಒತ್ತಡ ಹೇರುತ್ತಿದ್ದಾರೆ. ಜನಾರ್ಧನ ರೆಡ್ಡಿ ಅಥವಾ ಕರುಣಾಕರ ರೆಡ್ಡಿಯವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡವಂತೆ ಒತ್ತಡ ಹೇರಿದ್ದಾರೆ ಎಂದು ಎಂದು ಪಕ್ಷದ ಅನಧಿಕೃತ ಮೂಲಗಳು ಬಹಿರಂಗಪಡಿಸಿವೆ.