ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಇಬ್ರಾಹಿಂ ಮನೆಯಲ್ಲಿ ಸಿದ್ದು-ಕುಮಾರ ಗುಪ್ತ್ ಗುಪ್ತ್ ಮಾತುಕತೆ (Sidharamaih | HD Kumaraswamy | CM Ibrahim | Congress)
Bookmark and Share Feedback Print
 
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ದಕ್ಷಿಣ ಭಾರತದ ಮೊದಲ ಬಿಜೆಪಿ ಸರಕಾರವನ್ನು ಪತನಗೊಳಿಸುವ ಸಂಚು ಎರಡೆರಡು ಬಾರಿ ವಿಫಲವಾದ ನಂತರ ಮತ್ತೊಂದು ಮಹತ್ವದ ಬೆಳವಣಿಗೆಯೊಂದು ಆರಂಭವಾಗಿದೆ.

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್ ಮುಖಂಡ ಸಿ.ಎಂ. ಇಬ್ರಾಹಿಂ ಅವರ ಮನೆಗೆ ಹೋಗಿದ್ದು, ಗಂಟೆಗಳಿಗೂ ಹೆಚ್ಚು ಕಾಲ ಮಾತುಕತೆ ನಡೆಸಿ ಕುತೂಹಲಕ್ಕೆ ಕಾರಣರಾಗಿದ್ದಾರೆ.

ಇಂದು ಅಪರಾಹ್ನ ಈ ಬೆಳವಣಿಗೆ ನಡೆದಿದೆ. ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಪ್ರತ್ಯೇಕ ವಾಹನಗಳಲ್ಲಿ ಇಬ್ರಾಹಿಂ ಅವರ ಬೆಂಗಳೂರಿನ ಬೆನ್ಸನ್ ಟೌನ್‌ನಲ್ಲಿನ ನಿವಾಸಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಉಭಯ ನಾಯಕರು ಪ್ರಸಕ್ತ ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದರು ಎಂದು ಹೇಳಲಾಗಿದೆ. ನಾಳೆ ಅನರ್ಹಗೊಂಡ ಶಾಸಕರ ಮಹತ್ವದ ತೀರ್ಪನ್ನು ಹೈಕೋರ್ಟ್ ನೀಡಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ನಾಯಕರ ಮಾತುಕತೆ ಮಹತ್ವ ಪಡೆದುಕೊಂಡಿದೆ.

ಈ ಬಗ್ಗೆ ಪ್ರತಿಕ್ರಿಯೆ ಅಥವಾ ಮಾತುಕತೆಯ ವಿವರಗಳನ್ನು ಬಹಿರಂಗಪಡಿಸಲು ನಾಯಕರು ನಿರಾಕರಿಸಿದ್ದಾರೆ. ಮೂಲಗಳ ಪ್ರಕಾರ ಮುಂದಿನ ದಿನಗಳಲ್ಲಿ ಸರಕಾರವನ್ನು ಹೇಗೆ ಇಕ್ಕಟ್ಟಿಗೆ ಸಿಲುಕಿಸಬಹುದು ಎಂಬ ತಂತ್ರಗಳನ್ನು ರೂಪಿಸುವ ಮಾತುಕತೆ ನಡೆಸಲಾಗಿದೆ ಎಂದು ಹೇಳಲಾಗಿದೆ.

ನಾಳೆ ಹೈಕೋರ್ಟ್ ಪಕ್ಷೇತರ ಶಾಸಕರ ಅನರ್ಹತೆ ಕಾನೂನಿಗೆ ವಿರುದ್ಧವಾದದ್ದು ಎಂದು ತೀರ್ಪು ನೀಡಿದರೂ, ಪ್ರಸಕ್ತ ಪರಿಸ್ಥಿತಿಯಲ್ಲಿ ಬಿಜೆಪಿ ಸರಕಾರಕ್ಕೆ ಧಕ್ಕೆಯಾಗದು. ಅತ್ತ ಜೆಡಿಎಸ್‌ನ ಚನ್ನಪಟ್ಟಣ ಶಾಸಕ ಅಶ್ವಥ್ ರಾಜೀನಾಮೆ ನೀಡಿ ಬಿಜೆಪಿಯತ್ತ ಹೊರಟಿದ್ದಾರೆ.

ಈ ನಡುವೆ ಇನ್ನಷ್ಟು ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ಆಪರೇಷನ್ ಕಮಲದ ಮೂಲಕ ಸೆಳೆದುಕೊಳ್ಳಲಾಗುತ್ತದೆ ಎಂಬ ಮಾಹಿತಿಗಳ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳನ್ನು ಹೇಗೆ ರಕ್ಷಿಸಿಕೊಳ್ಳುವುದು ಎಂಬ ಮಾತುಕತೆಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ.
ಸಂಬಂಧಿತ ಮಾಹಿತಿ ಹುಡುಕಿ