ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಒಂದೇ ವೇದಿಕೆಯಲ್ಲಿ ಸಿಎಂ ಮತ್ತು ಜಡ್ಜ್: ವಿಶ್ವನಾಥ್‌ಗೆ ಅನುಮಾನ! (High court | Chief Justice Khehar | Yeddyyrappa | Mysore Dasara)
Bookmark and Share Feedback Print
 
ವಿಶ್ವವಿಖ್ಯಾತ ಮೈಸೂರು ದಸರಾದ ಜಂಬೂ ಸವಾರಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜತೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಖೇಹರ್ ಅವರು ವೇದಿಕೆ ಹಂಚಿಕೊಂಡಿದ್ದು ಸರಿಯಲ್ಲ ಎಂದು ಸಂಸದ ಎಚ್.ವಿಶ್ವನಾಥ್ ಆಕ್ಷೇಪ ವ್ಯಕ್ತಪಡಿಸಿ ಇದು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ ಎಂದು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ ನಮ್ಮನ್ನು ಫಾಲೋ ಮಾಡಿ

ಮಂಗಳವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ನ್ಯಾಯಾಂಗ ಪವಿತ್ರವಾಗಿರಬೇಕು ಎಂಬುದು ಜನಾಪೇಕ್ಷೆ. ಹಾಗಾಗಿ 16 ಶಾಸಕರ ಅನರ್ಹತೆ ಪ್ರಕರಣದ ವಿಚಾರಣೆ ಹಿನ್ನೆಲೆಯಲ್ಲಿ ಮುಖ್ಯನ್ಯಾಯಮೂರ್ತಿ ಖೇಹರ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆತಿಥ್ಯ ಒಪ್ಪಿ ದಸರಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ಸರಿಯೇ ಎಂದು ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿ ಜತೆ ಮುಖ್ಯ ನ್ಯಾಯಮೂರ್ತಿ ಖೇಹರ್ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಸಿಜೆ ಅವರ ಮೈಸೂರು ಭೇಟಿ ಸಂಶಯಕ್ಕೆ ಎಡೆಮಾಡಿಕೊಟ್ಟಿದೆ. ಇದರಿಂದಾಗಿ ಮುಖ್ಯನ್ಯಾಯಮೂರ್ತಿಗಳನ್ನೇ ಅನುಮಾನದಿಂದ ನೋಡುವಂತಾಗಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು.

ಭಾನುವಾರ ವಿಜಯದಶಮಿಯ ಜಂಬೋ ಸವಾರಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜತೆ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ಜಗದೀಶ್ ಸಿಂಗ್ ಖೇಹರ್ ಅವರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ರಾಜವಂಶಸ್ಥ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್, ಸಚಿವರಾದ ಎಸ್.ಎ.ರಾಮದಾಸ್, ಸಿ.ಎಚ್.ವಿಜಯಶಂಕರ್ ಪಾಲ್ಗೊಂಡಿದ್ದರು.

ಅಸಮಾಧಾನ ಯಾಕೆ?: 11 ಮಂದಿ ಪಕ್ಷೇತರ ಶಾಸಕರ ಅನರ್ಹತೆ ಪ್ರಕರಣದ ಕುರಿತಂತೆ ಸೋಮವಾರ ಹೈಕೋರ್ಟ್ ದ್ವಿಸದಸ್ಯ ಪೀಠದ ನ್ಯಾಯಮೂರ್ತಿಗಳಲ್ಲಿ ಒಬ್ಬರಾದ, ಮುಖ್ಯ ನ್ಯಾಯಮೂರ್ತಿ ಖೇಹರ್ ಅವರು, ಶಾಸಕರ ಅನರ್ಹತೆ ಕುರಿತು ಸ್ಪೀಕರ್ ಅವರ ಆದೇಶ ಸರಿ ಎಂದು ತೀರ್ಪು ನೀಡಿದ್ದರು. ಅಲ್ಲದೇ ನಾಲ್ಕು ಅಂಶಗಳಲ್ಲಿ ಎಲ್ಲವೂ ಕಾನೂನುಬದ್ದವಾಗಿಯೇ ಇದೆ ಎಂದು ಅಭಿಪ್ರಾಯವ್ಯಕ್ತಪಡಿಸಿದ್ದರು.
ಆದರೆ ಮತ್ತೊಬ್ಬ ನ್ಯಾಯಮೂರ್ತಿ ಎನ್.ಕುಮಾರ್ ಅವರು ಅನರ್ಹತೆ ವಿಚಾರದಲ್ಲಿ ಸ್ಪೀಕರ್ ಅವರ ಆದೇಶವನ್ನು ವಜಾಗೊಳಿಸಿದ್ದರು. ಇದರಿಂದಾಗಿ ಪ್ರಕರಣದ ಅಂತಿಮ ತೀರ್ಪು ನೀಡಲು ಮೂರನೇ ನ್ಯಾಯಮೂರ್ತಿಗೆ ವರ್ಗಾಯಿಸಲಾಗಿತ್ತು.

ಶಾಸಕರ ಅನರ್ಹತೆ ಪ್ರಕರಣದ ವಿಚಾರದಲ್ಲಿ ನ್ಯಾಯಮೂರ್ತಿಗಳ ತೀರ್ಪು ವಿಭಿನ್ನವಾಗಿ ಹೊರಬಿದ್ದಿರುವುದು ಕಾಂಗ್ರೆಸ್ ಅಸಮಾಧಾನಕ್ಕೆ ಕಾರಣವಾಗಿದೆ. ಅಲ್ಲದೇ, ಖೇಹರ್ ಅವರ ತೀರ್ಪು ಕೂಡ ಕಾಂಗ್ರೆಸ್ (ಮತ್ತು ಜೆಡಿಎಸ್‌) ಪಕ್ಷಕ್ಕೆ ದೊಡ್ಡ ಹೊಡೆದ ನೀಡಿದಂತಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯನ್ಯಾಯಮೂರ್ತಿಗಳು ನೀಡಿರುವ ತೀರ್ಪಿ ಬಗ್ಗೆ ವಿಶ್ವನಾಥ್ ಆಕ್ಷೇಪ ವ್ಯಕ್ತಪಡಿಸಿ, ದಸರಾ ಕಾರ್ಯಕ್ರಮದಲ್ಲಿ ಸಿಎಂ ಜತೆ ವೇದಿಕೆ ಹಂಚಿಕೊಂಡಿದ್ದರ ಬಗ್ಗೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಇದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ ಎಂಬ ಆರೋಪ ವಿಶ್ವನಾಥ್ ಅವರದ್ದಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ