ಬಿಜೆಪಿಯ 11 ಮತ್ತು ಐವರು ಪಕ್ಷೇತರರ ವಿರುದ್ಧ ಕೈಗೊಂಡ ಕ್ರಮದ ಬಗ್ಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಸ್ಪೀಕರ್ ವಿರುದ್ಧ ಹಗುರವಾಗಿ ಟೀಕೆ ಮಾಡಿ ಅಗೌರವ ಸೂಚಿಸಿದ್ದರು. ಸ್ಪೀಕರ್ ಬಿಜೆಪಿ ಏಜೆಂಟ್ ಎಂದು ಟೀಕಿಸಿದ್ದರು. ಅಲ್ಲದೆ ಅ.11ರಂದು ವಿಧಾನ ಮಂಡಲದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ನಡೆದುಕೊಂಡ ರೀತಿ ಅವರ ಸ್ಥಾನಕ್ಕೆ ತಕ್ಕುದಾಗಿರಲಿಲ್ಲ.
ಸ್ಪೀಕರ್ ಕೈಗೊಂಡ ಕ್ರಮಗಳ ನಾಲ್ಕು ಅಂಶಗಳಲ್ಲಿ ಮೂರನ್ನು ನ್ಯಾಯಮೂರ್ತಿ ಎತ್ತಿ ಹಿಡಿದಿದ್ದಾರೆ. ಸಿದ್ದರಾಮಯ್ಯ, ರೇವಣ್ಣ ಕುಮಾರಸ್ವಾಮಿ ಮತ್ತು ದೇಶಪಾಂಡೆ ಅವರಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತು ಶಾಸಕಾಂಗದ ಬಗ್ಗೆ ಗೌರವ ಇರುವುದಾದಲ್ಲಿ ಸ್ಪೀಕರ್‌ಗೆ ನಿಂದಿಸಿದ ಕಾರಣಕ್ಕಾಗಿ ಜನತೆಯ ಕ್ಷಮೆ ಯಾಚಿಸಬೇಕೆಂದು ಪಕ್ಷದ ಜಿಲ್ಲಾ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.
ಪ್ರಾರಂಭದಲ್ಲಿ ಬಿಜೆಪಿಯ ಆಂತರಿಕ ವಿಚಾರಗಳಲ್ಲಿ ತಲೆ ಹಾಕುವುದಿಲ್ಲ ಎಂದಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಈಗ ಬಿಜೆಪಿಯ 11 ಮತ್ತು ಐವರು ಪಕ್ಷೇತರ ಶಾಸಕರನ್ನು ರೆಸಾರ್ಟ್‌ನಲ್ಲಿ ಕೂಡಿಟ್ಟುಕೊಂಡಿದ್ದಾರೆ. ಇಂತಹವರು ಬಿಜೆಪಿ ಹಣದ ಆಮಿಷವೊಡ್ಡಿ ಪಕ್ಷಾಂತರ ಮಾಡುತ್ತಿದೆ ಎಂದು ಆಪಾದನೆ ಮಾಡುತ್ತಿದ್ದಾರೆ. ಇಲ್ಲಿ ಯಾರು ಹಣದ ಆಮಿಷವೊಡ್ಡುತ್ತಿದ್ದಾರೆ ಎಂಬುದು ಜನತೆಗೆ ತಿಳಿದಿದೆ ಎಂದರು.