ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ನನ್ನ ಕುರ್ಚಿ ಅಲುಗಾಡಿಸಲು ಸಾಧ್ಯವಿಲ್ಲ: ಯಡಿಯೂರಪ್ಪ (BJP | Yeddyurappa | Congress | JDS | Kumaraswamy | Valmiki Jayanthi)
Bookmark and Share Feedback Print
 
'ಸಿ.ಡಿ ರಾಜಕಾರಣವನ್ನು ಕೂಡಲೇ ನಿಲ್ಲಿಸಬೇಕೆಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಯವರಿಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಯಾವುದೇ ತಂತ್ರಗಾರಿಕೆಯಿಂದಲೂ ನನ್ನ ಕುರ್ಚಿ ಅಲುಗಾಡಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ನಗರದಲ್ಲಿ ಶುಕ್ರವಾರ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಡಿ ಬಗ್ಗೆ ಮಾತನಾಡಲು ಇಚ್ಚಿಸುವುದಿಲ್ಲ ಎಂದರು. ಅಷ್ಟೇ ಅಲ್ಲ ಸಿ.ಡಿ ಬಿಡುಗಡೆ ಬಗ್ಗೆ ಯಾವುದೇ ತನಿಖೆ ನಡೆಸುವುದಿಲ್ಲ, ಅದರ ಅಗತ್ಯವೂ ಇಲ್ಲ ಎಂದು ಸ್ಪಷ್ಟಪಡಿಸಿದರು. ನಾನು ಮುಖ್ಯಮಂತ್ರಿಯಾಗಿ ಐದು ವರ್ಷಗಳ ಕಾಲದ ಅವಧಿಯನ್ನು ಪೂರೈಸುತ್ತೇನೆ ಎಂದು ವಿಶ್ವಾಸವ್ಯಕ್ತಪಡಿಸಿದರು.

ಜೆಡಿಎಸ್‌ನ ಗುಬ್ಬಿ ಕ್ಷೇತ್ರದ ಶಾಸಕ ಶ್ರೀನಿವಾಸ್ ಅವರನ್ನು ಬಿಜೆಪಿಗೆ ಸೆಳೆಯಲು ಸುರೇಶ್ ಗೌಡ ಅವರು ದೂರವಾಣಿಯಲ್ಲಿ ಹಣದ ಆಮಿಷ ಒಡ್ಡಿರುವ ವೀಡಿಯೋ ಚಿತ್ರೀಕರಣದ ದೃಶ್ಯವನ್ನು ಗುರುವಾರ ಎಚ್.ಡಿ.ಕುಮಾರಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಬಹಿರಂಗಪಡಿಸಿದ್ದರು. ಈ ಬಗ್ಗೆ ಮುಖ್ಯಮಂತ್ರಿಗಳನ್ನು ಸುದ್ದಿಗಾರರು ಪ್ರಶ್ನಿಸಿದಾಗ, ಆ ಬಗ್ಗೆ ತಾನು ಮಾತನಾಡುವುದಿಲ್ಲ ಎಂದರು.

11 ಜನ ಬಿಜೆಪಿ ಶಾಸಕರನ್ನು ಚೆನ್ನೈ, ಗೋವಾ ರೆಸಾರ್ಟ್‌‌ಗಳಲ್ಲಿ ಬಂಧನದಲ್ಲಿ ಇಟ್ಟು ರಾಜಕೀಯ ಮಾಡಿದವರಿಂದ ಯಾವುದೇ ಉಪದೇಶದ ಪಾಠ ಕಲಿಯಬೇಕಾದ ಅಗತ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕುದುರೆ ವ್ಯಾಪಾರಕ್ಕೆ ಮೊದಲು ಚಾಲನೆ ನೀಡಿದವರೇ ಜೆಡಿಎಸ್ ಪಕ್ಷ. ಹಾಗಾಗಿ ಅಂತಹ ಕೀಳುಮಟ್ಟದ ರಾಜಕಾರಣ ಮಾಡುವವರಿಂದ ನೀತಿ ಪಾಠ ಕಲಿತುಕೊಳ್ಳಬೇಕಾದ ಅಗತ್ಯವಿಲ್ಲ ಎಂದರು.

ಕಾಂಗ್ರೆಸ್ ಮತ್ತು ಜೆಡಿಎಸ್ ಜವಾಬ್ದಾರಿಯುತವಾಗಿ ನಡೆದುಕೊಳ್ಳುವುದನ್ನು ಬಿಟ್ಟು, ಅಧಿಕಾರದ ದಾಹದಿಂದ ಏನೆಲ್ಲಾ ರಾಜಕೀಯ ಕಸರತ್ತು ನಡೆಸುತ್ತಿದ್ದಾರೆ ಎಂಬುದನ್ನು ರಾಜ್ಯದ ಜನ ಗಮನಿಸುತ್ತಿದ್ದಾರೆ. ಅವರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಈ ಸಂದರ್ಭದಲ್ಲಿ ಹೇಳಿದರು.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ ನಮ್ಮನ್ನು ಫಾಲೋ ಮಾಡಿ
ಸಂಬಂಧಿತ ಮಾಹಿತಿ ಹುಡುಕಿ