ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸಿಎಂಗೆ ನೈತಿಕತೆ ಇದ್ರೆ ರಾಜೀನಾಮೆ ಕೊಡ್ಲಿ: ವೀರಪ್ಪ ಮೊಯ್ಲಿ (BJP | Yeddyurappa | Veerappa moily | Congress | JDS)
Bookmark and Share Feedback Print
 
ಪಕ್ಷಾಂತರ ನಿಷೇಧ ಕಾಯ್ದೆಯನ್ನು ಈಗ ಇರುವುದಕ್ಕಿಂತ ಮತ್ತಷ್ಟು ಬಿಗಿಗೊಳಿಸಬೇಕಾಗಿದೆ ಎಂದು ಕೇಂದ್ರ ಕಾನೂನು ಸಚಿವ ಎಂ.ವೀರಪ್ಪ ಮೊಯ್ಲಿ ತಿಳಿಸಿದ್ದಾರೆ.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಿದ್ದ ವಿಜೆಲೆನ್ಸ್ ಮತ್ತು ಮಾನಿಟರಿಂಗ್ ಸಭೆಯಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯದಲ್ಲಿ ಆಡಳಿತ ನಿರ್ವಹಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಸ್ವಲ್ಪನಾದ್ರೂ ನೈತಿಕ ಮೌಲ್ಯವೇನಾದರು ಇದ್ದಲ್ಲಿ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಹಣ ಮತ್ತು ಅಧಿಕಾರದ ಆಮಿಷದಿಂದ ಪ್ರಜಾಪ್ರಭುತ್ವವನ್ನು ಅಸ್ಥಿರಗೊಳಿಸುವ ಕೆಲಸ ಆಡಳಿತಾರೂಢ ಬಿಜೆಪಿ ವತಿಯಿಂದ ನಡೆಯುತ್ತಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಗಂಡಾಂತರಕಾರಿ ವಿಚಾರವಾಗಿದೆ ಎಂದರು.
ಸಂಬಂಧಿತ ಮಾಹಿತಿ ಹುಡುಕಿ