ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸಿದ್ದು ಭರವಸೆ- 'ಕೈ' ಬಿಡಲ್ಲ; ಉಲ್ಟಾ ಹೊಡೆದ ಗುತ್ತೇದಾರ್ (BJP | Siddaramaiah | Congress | JDS | Malikayya | Bangalore)
Bookmark and Share Feedback Print
 
'ಕಾಂಗ್ರೆಸ್ ಪಕ್ಷದಲ್ಲಿ ಮೂಲ ಕಾಂಗ್ರೆಸ್ಸಿಗರಿಗೆ ಬೆಲೆಯೇ ಇಲ್ಲದಂತಾಗಿದೆ. ಹಾಗಾಗಿ ತಾನು ಕಾಂಗ್ರೆಸ್ ಪಕ್ಷದಲ್ಲಿ ಇರುವುದಿಲ್ಲ' ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದ ಅಫಜಲಪುರ ಶಾಸಕ ಮಾಲೀಕಯ್ಯ ಗುತ್ತೇದಾರ್ ಸೋಮವಾರ ಉಲ್ಟಾ ಹೊಡೆದಿದ್ದು ತಾನು ಕಾಂಗ್ರೆಸ್ ಪಕ್ಷ ತ್ಯಜಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸೋಮವಾರ ವಿಧಾನಸಭಾ ವಿರೋಧ ಪಕ್ಷದ ನಾಯಕ, ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯನವರ ನಿವಾಸದಲ್ಲಿ ಸಭೆ ನಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗಾದ ಅನ್ಯಾಯದ ಬಗ್ಗೆ ಸಿದ್ದರಾಮಯ್ಯನವರಿಂದ ನ್ಯಾಯ ಸಿಗುವ ಭರವಸೆ ದೊರೆತಿದೆ. ಆ ನಿಟ್ಟಿನಲ್ಲಿ ನಾನು ಕಾಂಗ್ರೆಸ್ ತೊರೆಯುವ ನಿರ್ಧಾರದಿಂದ ಹಿಂದೆ ಸರಿದಿದ್ದೇನೆ ಎಂದರು.

ಹೈಕಮಾಂಡ್ ಜೊತೆ ಮಾತನಾಡಿ ನಮ್ಮ ಸಮಸ್ಯೆ ಬಗೆಹರಿಸುವುದಾಗಿ ಸಿದ್ದರಾಮಯ್ಯನವರು ಭರವಸೆ ನೀಡಿದ್ದಾರೆ. ಹಾಗಾಗಿ ಭರವಸೆ ಈಡೇರಿಕೆಗಾಗಿ ಕಾಯುತ್ತೇವೆ. ಅದೇ ರೀತಿ ಪಕ್ಷದಲ್ಲಿಯೇ ಇದ್ದು, ಒಗ್ಗಟ್ಟಿನಿಂದ ಮುಂದುವರಿಯುವುದಾಗಿ ಈ ಸಂದರ್ಭದಲ್ಲಿ ಹೇಳಿದರು.

ಗುಲ್ಬರ್ಗಾ ಅಫಜಲಪುರ ಶಾಸಕರಾಗಿರುವ ಮಾಲೀಕಯ್ಯ ಗುತ್ತೇದಾರ್ ಅವರು ಕಾಂಗ್ರೆಸ್ ಪಕ್ಷ ತೊರೆಯಲಿದ್ದಾರೆ ಎಂಬ ಊಹಾಪೋಹ ಹರಿಡಿತ್ತು. ಅದಕ್ಕೆ ಪೂರಕ ಎಂಬಂತೆ ಭಾನುವಾರ ಗುತ್ತೇದಾರ್ ಅವರು ಮಾಧ್ಯಮವೊಂದರ ಜತೆ ಮಾತನಾಡುತ್ತ, ಕಾಂಗ್ರೆಸ್‌ನಲ್ಲಿ ತನಗೆ ಉಸಿರುಗಟ್ಟುವ ವಾತಾವರಣ ಇದ್ದು, ಕಾಂಗ್ರೆಸ್ ತ್ಯಜಿಸುವ ಇಂಗಿತ ವ್ಯಕ್ತಪಡಿಸಿದ್ದರು.

ಆದರೂ ತನ್ನ ಸಮಸ್ಯೆಯ ಬಗ್ಗೆ ಸಿದ್ದರಾಮಯ್ಯನವರ ಬಲಿ ಚರ್ಚಿಸುತ್ತೇನೆ. ಒಂದು ವೇಳೆ ಹೈಕಮಾಂಡ್ ತನ್ನ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರೆ, ತನ್ನ ನಿರ್ಧಾರದ ಬಗ್ಗೆ ಪರಿಶೀಲನೆ ನಡೆಸುವುದಾಗಿ ನಿನ್ನೆ ಹೇಳಿದ್ದರು.
ಸಂಬಂಧಿತ ಮಾಹಿತಿ ಹುಡುಕಿ