ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕೋರ್ಟ್ ತೀರ್ಪಿನ ನಂತ್ರ ಬಣ್ಣ ಬಯಲು: ಮಲ್ಲಿಕಾರ್ಜುನ ಖರ್ಗೆ (High court | Mallikarjuna Kharghe | BJP | Yeddyurappa)
Bookmark and Share Feedback Print
 
ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಶಾಸಕರ ಅನರ್ಹತೆ ವಿವಾದ ತೀರ್ಪು ಪ್ರಕಟಗೊಂಡ ನಂತರವೇ ಎಲ್ಲರ ಬಣ್ಣ ಬಯಲಾಗುತ್ತದೆ, ಅಲ್ಲಿಯವರೆಗೆ ಕಾಯಿರಿ ಎಂದು ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಸಚಿವ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ನಗರದಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿ, ಸರಕಾರ ಅಭದ್ರಗೊಳಿಸುತ್ತಿರುವ ಪ್ರತಿಪಕ್ಷಗಳ ವರ್ತನೆ ಕುರಿತು ತನಿಖೆ ನಡೆಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿರುವ ಬಗ್ಗೆ ಈ ರೀತಿಯಾಗಿ ಪ್ರತಿಕ್ರಿಯಿಸಿದರು.

ತೀರ್ಪು ಬರುವವರೆಗೆ ಹಾಗೆ ಹೇಳುತ್ತಾರೆ. ಆದರೆ ಯಾವುದರ ಬಗ್ಗೆ ತನಿಖೆ ನಡೆಸುತ್ತೇವೆ ಎಂಬುದನ್ನು ಮೊದಲು ಸ್ಪಷ್ಟಪಡಿಸಲಿ ಎಂದು ಒತ್ತಾಯಿಸಿದರು. ಈಗ ಆರೋಪ-ಪ್ರತ್ಯಾರೋಪ ಮಾಡುವುದರಲ್ಲಿ ಯಾವುದೇ ಪ್ರಯೋಜನ ಇಲ್ಲ ಎಂದರು.

ಬಿಜೆಪಿ ಜತೆಗೆ ಕಾಂಗ್ರೆಸ್ ಹೈಕಮಾಂಡ್ ಒಳ ಒಪ್ಪಂದ ಮಾಡಿಕೊಂಡಿದೆ ಎಂಬ ದೇವೇಗೌಡರ ಆರೋಪ ಹುರುಳಿಲ್ಲದ್ದು, ಬಿಜೆಪಿ ನೆರಳು ಕಂಡರೆ ಕಾಂಗ್ರೆಸ್‌ಗೆ ಆಗಲ್ಲ ಎಂದರು. ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳನ್ನು ಕೇಂದ್ರ ಸರಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಸಚಿವ ಖರ್ಗೆ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಸಂಬಂಧಿತ ಮಾಹಿತಿ ಹುಡುಕಿ