ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕೆಪಿಸಿಸಿ ಅಧ್ಯಕ್ಷಗಾದಿ; ಡಾ.ಪರಮೇಶ್ವರ್ ಅಧಿಕಾರ ಸ್ವೀಕಾರ (KPCC | Parameshwar | Congress | BJP | Bangalore)
Bookmark and Share Feedback Print
 
PR
ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕಾಂಗ್ರೆಸ್‌ನ ಹಿರಿಯ ಮುಖಂಡ, ಶಾಸಕ ಡಾ.ಜಿ.ಪರಮೇಶ್ವರ್ ಅವರು ಶುಕ್ರವಾರ ವಿಧ್ಯುಕ್ತವಾಗಿ ಅಧಿಕಾರ ಸ್ವೀಕರಿಸಿದರು.

ನಗರದ ಕೆಪಿಸಿಸಿ ಕಚೇರಿ ಆವರಣದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಜಿ.ಪರಮೇಶ್ವರ್ ಅವರು ಅಧಿಕಾರ ವಹಿಸಿಕೊಂಡರು. ನಿರ್ಗಮಿತ ಅಧ್ಯಕ್ಷ ಆರ್.ವಿ.ದೇಶಪಾಂಡೆ ಅವರು ಪರಮೇಶ್ವರ್ ಅವರಿಗೆ ಕಾಂಗ್ರೆಸ್ ಧ್ವಜ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು. ಕೇಂದ್ರ ಸಚಿವರಾದ ಸಚಿನ್ ಪೈಲಟ್, ಕೆ.ಎಚ್.ಮುನಿಯಪ್ಪ ಮುಂತಾದ ಗಣ್ಯರು ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ತುಮಕೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಮಂಡ್ಯ, ಮದ್ದೂರು, ಮೈಸೂರು, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಿಂದ ಪರಮೇಶ್ವರ್ ಅವರ ಅಪಾರ ಅಭಿಮಾನಿಗಳು ಪದವಿ ಗ್ರಹಣ ಸಮಾರಂಭಕ್ಕೆ ಆಗಮಿಸಿದ್ದರು. ನಗರದೆಲ್ಲೆಡೆ ಪರಮೇಶ್ವರ್ ಅವರಿಗೆ ಅಭಿನಂದನೆ ಸಲ್ಲಿಸುವ ಬೃಹತ್ ಕಟೌಟ್‌ಗಳು, ಬ್ಯಾನರ್‌ಗಳು ರಾರಾಜಿಸುತ್ತಿದ್ದವು. ಕೆಪಿಸಿಸಿ ಕಚೇರಿಯ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಅಭಿಮಾನಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.

ಅಧಿಕಾರ ಸ್ವೀಕಾರಕ್ಕೂ ಮೊದಲು ಮಾತನಾಡಿದ ಪರಮೇಶ್ವರ್ ಅವರು, ಸಂಘರ್ಷದಿಂದ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಸಂಯಮದಿಂದ ಎಲ್ಲವನ್ನೂ ಸಾಧಿಸಬಹುದು ಎಂದರು. ಸಾಮೂಹಿಕ ನಾಯಕತ್ವ, ಸಾಮೂಹಿಕ ಹೊಣೆಗಾರಿಕೆಯಲ್ಲಿ ನಾವು ಸಾಗೋಣ ಎಂದು ಕರೆ ನೀಡಿದರು.
ಸಂಬಂಧಿತ ಮಾಹಿತಿ ಹುಡುಕಿ