ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಪಕ್ಷಾಂತರ ನಿಷೇಧ ಕಾಯ್ದೆ ತಿದ್ದುಪಡಿ ಮಾಡ್ತೇವೆ: ಮೊಯ್ಲಿ (Veerappa Moily | BJP | Congress | UPA | Yeddyurappa)
Bookmark and Share Feedback Print
 
ಕೇಂದ್ರ ಸರ್ಕಾರ ಪಕ್ಷಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ ತರುವ ಚಿಂತನೆ ನಡೆಸಿದೆ ಎಂದು ಕೇಂದ್ರ ಕಾನೂನು ಸಚಿವ ಎಂ. ವೀರಪ್ಪ ಮೊಯ್ಲಿ ತಿಳಿಸಿದ್ದಾರೆ.

ಆಪರೇಷನ್ ಕಮಲದ ಹೆಸರಿನಲ್ಲಿ ಭಾರತೀಯ ಜನತಾ ಪಕ್ಷದಿಂದ ಪಕ್ಷಾಂತರ ನಿಷೇಧ ಕಾಯ್ದೆಯ ದುರುಪಯೋಗವಾಗಿದೆ.ಆಡಳಿತಾರೂಢ ಬಿಜೆಪಿ ಪಕ್ಷ ಆಪರೇಷನ್ ಕಮಲ ನಡೆಸುವ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸಿದೆ ಎಂದು ಮೊಯ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪಕ್ಷಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ ತರಲು ಆಲೋಚಿಸುತ್ತಿದೆ ಎಂದು ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದ್ದಾರೆ. ಪಕ್ಷಾಂತರ ನಿಷೇಧ ಕಾಯ್ದೆ ದುರುಪಯೋಗ ಪಡಿಸಿಕೊಂಡಿರುವ ಬಿಜೆಪಿ ಮುಂದಿನ ದಿನಗಳಲ್ಲಿ ಅದಕ್ಕೆ ತಕ್ಕ ಬೆಲೆ ತೆರಲಿದೆ ಎಂದು ಅವರು ಈ ಸಂದರ್ಭದಲ್ಲಿ ಅಭಿಪ್ರಾಯಪಟ್ಟರು.
ಸಂಬಂಧಿತ ಮಾಹಿತಿ ಹುಡುಕಿ