ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕಪ್ಪು ಬಾವುಟ ಹಾರಿಸಿದರೆ ಹುಷಾರ್; ಎಂಇಎಸ್‌ಗೆ ಎಚ್ಚರಿಕೆ (Karnataka Rajyotsava | Karnataka | Govt Ashok | MES)
Bookmark and Share Feedback Print
 
ಕರ್ನಾಟಕದ ರಾಜ್ಯೋತ್ಸವ ದಿನದಂದು ಮಹಾರಾಷ್ಟ್ರ ಏಕೀಕರಣ ಸಮಿತಿಯು (ಎಂಇಎಸ್) ಕರಾಳ ದಿನ ಆಚರಣೆ ಮಾಡಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ರಾಜ್ಯ ಗೃಹ ಸಚಿವ ಆರ್. ಅಶೋಕ್ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಎಂಇಎಸ್ ಸೈಕಲ್ ರ‌್ಯಾಲಿ ಹಮ್ಮಿಕೊಂಡಿದೆ. ಆದರೆ ಎಂಇಎಸ್‌ನ ಪುಂಡಾಟಿಕೆಯನ್ನು ಸಹಿಸಲು ಸಾಧ್ಯವಿಲ್ಲ ಎಂದವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಕನ್ನಡಿಗರ ಭಾವನೆಗೆ ಧಕ್ಕೆ ತರುವಂತಹ ಯಾವುದೇ ಘಟನೆ ನಡೆದರೂ ಸರಕಾರ ಸಮ್ಮನೆ ಕೂರುವುದಿಲ್ಲ. ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಈ ಸಂಬಂಧ ಬೆಳಗಾವಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿಯೊಂದಿಗೆ ಚರ್ಚೆ ನಡೆಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಚಿಸಲಾಗಿದೆ ಎಂದವರು ಹೇಳಿದರು.

ನಾಳೆ ಎಂಇಎಸ್ ರ‌್ಯಾಲಿಗೆ ಮಾತ್ರ ಬೆಳಗಾವಿ ಎಸ್‌ಪಿ ಅನುಮತಿ ನೀಡಿದ್ದಾರೆ. ಪ್ರತಿ ವರ್ಷದಂತೆ ಮಹಾರಾಷ್ಟ್ರ ಏಕೀಕರಣ ಸಮಿತಿ ಸೈಕಲ್ ಜಾಥಾ ನಡೆಸಲು ಅನುಮತಿ ಕೋರಿದ್ದಾರೆ. ಆದರೆ ಭಾಷಾ ಸಾಮರಸ್ಯಕ್ಕೆ ಧಕ್ಕೆ ತಂದರೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದವರು ಎಚ್ಚರಿಕೆಯಲ್ಲಿ ತಿಳಿಸಿದರು.

ರಾಜಕೀಯ ಅಸ್ತಿತ್ವಕ್ಕಾಗಿ ಅವಕಾಶ ಸಿಕ್ಕಾಗಲೆಲ್ಲ ಎಂಇಎಸ್‌ ಪುಂಡಾಟಿಕೆ ನಡೆಸುತ್ತಲೇ ಬಂದಿವೆ. ಇದು ಸರಿಯಾದ ಕ್ರಮವಲ್ಲ. ಈ ನಾಡಿನಲ್ಲಿ ಹುಟ್ಟಿದ ಜನ ಇಲ್ಲಿಗೆ ಗೌರವ ಕೊಡತಕ್ಕದ್ದು ಅವರ ಕರ್ತವ್ಯ ಎಂದವರು ಸೇರಿಸಿದರು.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ 'ವೆಬ್‌ದುನಿಯಾ'ವನ್ನು ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಸಂಬಂಧಿತ ಮಾಹಿತಿ ಹುಡುಕಿ