ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಪಕ್ಷೇತರರ ಅನರ್ಹತೆ; ಸ್ಪೀಕರ್‌ಗೆ ಹೈಕೋರ್ಟ್ ನೋಟಿಸ್ (Karnataka High Court | K G Bopaiah | disqualification | Independent MLA)
Bookmark and Share Feedback Print
 
NRB
ಐವರು ಪಕ್ಷೇತರ ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಕೆ.ಜಿ.ಬೋಪಯ್ಯ ಅವರ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಎರಡು ರಿಟ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ತಿಸದಸ್ಯ ಪೀಠ, ಸ್ಪೀಕರ್ ಹಾಗೂ ಐವರು ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ನವೆಂಬರ್ 8ಕ್ಕೆ ಮುಂದೂಡಿದೆ.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ ನಮ್ಮನ್ನು ಫಾಲೋ ಮಾಡಿ

ಮಂಗಳವಾರ ನ್ಯಾಯಮೂರ್ತಿಗಳಾದ ಮೋಹನ್ ಶಾಂತನಗೌಡರ್, ಎಸ್.ಅಬ್ದುಲ್ ನಜೀರ್ ಹಾಗೂ ಎ.ಎಸ್.ಬೋಪಣ್ಣ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಎರಡು ರಿಟ್ ಅರ್ಜಿಯ ವಿಚಾರಣೆ ನಡೆಸಿದೆ.

ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ, ಸ್ಪೀಕರ್ ಕೆ.ಜಿ.ಬೋಪಯ್ಯ ಹಾಗೂ ಐವರು ಮತದಾರರಾದ ಕೊಪ್ಪಳದ ಯಮನಪ್ಪ, ಹಿರಿಯೂರಿನ ಎಸ್.ಎಂ.ಬಸವರಾಜ್, ಮಳವಳ್ಳಿಯ ಚೆನ್ನೇಗೌಡ, ಪಾವಗಡದ ಕೃಷ್ಣಾ ನಾಯಕ್, ಹೊಸದುರ್ಗದ ನಾಗರಾಜ್‌ ಎಂಬವರಿಗೆ ನೋಟಿಸ್ ಜಾರಿ ಮಾಡಿದೆ.

ಅನರ್ಹಗೊಂಡ ಐವರು ಪಕ್ಷೇತರ ಶಾಸಕರು ತಮ್ಮನ್ನು ಅನರ್ಹಗೊಳಿಸಿ ಸ್ಪೀಕರ್ ಹೊರಡಿಸಿರುವ ಆದೇಶದ ರದ್ದತಿ ಕೋರಿ ಹೈಕೋರ್ಟ್‌ಗೆ ಇತ್ತೀಚೆಗೆ ಮತ್ತೊಂದು ಅರ್ಜಿ ಸಲ್ಲಿಸಿದ್ದರು. (ಅವರು ಈ ಹಿಂದೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನ.2ಕ್ಕೆ ನಡೆಸುವುದಾಗಿ ಹೈಕೋರ್ಟ್ ತಿಳಿಸಿತ್ತು) ಇನ್ನೊಂದು ಅರ್ಜಿ ಸಲ್ಲಿಸಿದ್ದ ಪಕ್ಷೇತರರು, ತಮ್ಮ ವಿರುದ್ಧ ಕ್ಷೇತ್ರದ ಮತದಾರರು ದೂರು ದಾಖಲಿಸಿರುವ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿ ಆ ಅರ್ಜಿಯನ್ನು ವಜಾಗೊಳಿಸುವಂತೆ ಕೋರಿದ್ದರು.

ಪಕ್ಷೇತರ ಶಾಸಕರ ಅನರ್ಹತೆ ವಿಚಾರಣೆ ಸಂದರ್ಭದಲ್ಲಿ ನರೇಂದ್ರಸ್ವಾಮಿ, ಗೂಳಿಹಟ್ಟಿ ಶೇಖರ್ ಹಾಗೂ ಶಿವರಾಜ್ ತಂಗಡಗಿ ನ್ಯಾಯಾಲಯದಲ್ಲಿ ಹಾಜರಿದ್ದರು.

ಆಡಳಿತಾರೂಢ ಬಿಜೆಪಿ ಸರಕಾರಕ್ಕೆ ನೀಡಿದ್ದ ಬೆಂಬಲವನ್ನು ಐವರು ಪಕ್ಷೇತರ ಶಾಸಕರು ವಾಪಸ್ ಪಡೆದಿದ್ದರು. ನಂತರ ಸ್ಪೀಕರ್ ಕೆ.ಜಿ.ಬೋಪಯ್ಯ ಅವರು ಐವರು ಶಾಸಕರನ್ನು ಅನರ್ಹಗೊಳಿಸಿದ್ದರು.

ಐವರು ಪಕ್ಷೇತರ ಶಾಸಕರು ಬಿಜೆಪಿಗೆ ಬೆಂಬಲ ಘೋಷಿಸುವ ಮೂಲಕ ಮೊತ್ತ, ಮೊದಲ ಬಾರಿಗೆ ದಕ್ಷಿಣ ಭಾರತದಲ್ಲಿ ಅಧಿಕಾರದ ಗದ್ದುಗೆಗೆ ಏರಿತ್ತು. ಆದರೆ ತಾವು ಪಕ್ಷೇತರ ಶಾಸಕರಾಗಿದ್ದರಿಂದ ತಮ್ಮನ್ನು ಪಕ್ಷಾಂತರ ನಿಷೇಧ ಕಾಯ್ದೆಯಡಿಯಲ್ಲಿ ಅನರ್ಹಗೊಳಿಸಲು ಸಾಧ್ಯವಿಲ್ಲ. ಯಾಕೆಂದರೆ ನಾವು ಬಿಜೆಪಿಯ ಚಿಹ್ನೆಯಡಿಯಲ್ಲಿ ಸ್ಪರ್ಧಿಸಿ ಗೆದ್ದಿಲ್ಲ ಎಂದು ಅರ್ಜಿಯಲ್ಲಿ ವಾದಿಸಿದ್ದರು.

ಏತನ್ಮಧ್ಯೆ, ಪಕ್ಷೇತರರು ಬಿಜೆಪಿ ಚಿಹ್ನೆಯಡಿ ಸ್ಪರ್ಧಿಸದಿದ್ದರು ಕೂಡ, ಅವರು ಬಿಜೆಪಿಗೆ ಬೆಂಬಲ ನೀಡಿದ್ದರು. ಬಳಿಕ ಅವರು ಸಚಿವರಾಗಿದ್ದರು. ಅವರು ಪಕ್ಷದ ಶಾಸಕಾಂಗ ಸಭೆಗೂ ಹಾಜರಾಗುತ್ತಿದ್ದರು. ಅಷ್ಟೇ ಅಲ್ಲ ರಾಜ್ಯಸಭಾ ಚುನಾವಣೆಯಲ್ಲಿ ಅವರು ವಿಪ್ ಅನ್ನು ಸ್ವೀಕರಿಸಿದ್ದರು ಎಂದು ಬಿಜೆಪಿ ಪ್ರತಿವಾದ ಮಂಡಿಸಿದೆ.

ಒಟ್ಟಾರೆ 11 ಮಂದಿ ಬಿಜೆಪಿ ಶಾಸಕರು ಹಾಗೂ ಐವರು ಪಕ್ಷೇತರರು ಅನರ್ಹಗೊಂಡ ನಂತರ ವಿಧಾನಸಭೆಯಲ್ಲಿ ಬಿಜೆಪಿ 106 (ಸ್ಪೀಕರ್ ಸೇರಿ) ಶಾಸಕ ಬಲ ಹೊಂದಿದೆ.
ಸಂಬಂಧಿತ ಮಾಹಿತಿ ಹುಡುಕಿ