ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಜಿಲ್ಲಾ ಪಂಚಾಯತ್ ಚುನಾವಣೆ ನಂತರ ಸರ್ಜರಿ: ಈಶ್ವರಪ್ಪ (State politics | Karnataka | Yadyurappa | Eshwarappa)
Bookmark and Share Feedback Print
 
ರಾಜ್ಯ ಸರಕಾರದ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಗೊಂದಲಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಈಶ್ವರಪ್ಪ ತೆರೆ ಎಳೆದಿದ್ದು, ಜಿಲ್ಲಾ ಪಂಚಾಯತ್ ಚುನಾವಣೆ ನಂತರ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಬುಧವಾರ ಹೇಳಿಕೆ ನೀಡಿರುವ ಈಶ್ವರಪ್ಪ, ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ. ಮುಂಬರುವ ಚುನಾವಣೆಯಲ್ಲಿ ಪಕ್ಷದ ಸಂಪೂರ್ಣ ಸಾಮರ್ಥ್ಯ ಪ್ರದರ್ಶಿಸಲಿದ್ದೇವೆ. ಹೀಗಾಗಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಯ ನಂತರ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಹೇಳಿದರು.

ಪಕ್ಷದಲ್ಲಿ ಹುಟ್ಟಿಕೊಂಡಿರುವ ಭಿನ್ನಮತ ಹಿನ್ನೆಲೆಯಲ್ಲಿ ರಾಜ್ಯಾಕ್ಷರು ಈ ತೀರ್ಮಾನಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಶಾಸಕರಲ್ಲಿ ಅಸಮಾಧಾನ ಉಂಟಾದರೆ ಅದು ಮುಂದಿನ ಚುನಾವಣೆಯಲ್ಲಿ ಪಕ್ಷಕ್ಕೆ ವ್ಯತಿರಿಕ್ತ ಪರಿಣಾಮವನ್ನುಂಟುಮ ಮಾಡುವ ಸಾಧ್ಯತೆಯಿದೆ. ಹೀಗಾಗಿ ಈ ಎಲ್ಲಾ ವಿಚಾರಗಳನ್ನು ಮನಗಂಡು ಈಶ್ವರಪ್ಪ ಇಂತಹದೊಂದು ತೀರ್ಮಾನ ಕೈಗೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.

ಇಂದು ಕಾರ್ಯಕಾರಿಣಿ ಸಭೆ...
ಅದೇ ಹೊತ್ತಿಗೆ ಪಕ್ಷದ ಕಾರ್ಯಕಾರಿಣಿ ಸಭೆಯು ಇಂದು ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷರ ಸಹಿತ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತಕುಮಾರ್ ಮತ್ತು ಇನ್ನಿತರ ಪ್ರಮುಖರು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ 'ವೆಬ್‌ದುನಿಯಾ'ವನ್ನು ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಸಂಬಂಧಿತ ಮಾಹಿತಿ ಹುಡುಕಿ