ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಉಲ್ಟಾ ಹೊಡೆದ ಸಿಎಂ: ಸಚಿವರ ಪಟ್ಟಿ ಇನ್ನೂ ಅಂತಿಮವಾಗಿಲ್ಲ (Yeddyurappa | ministry expansion | D N Jeevaraj | Ishwarappa | Cabinet)
Bookmark and Share Feedback Print
 
ಕೊನೆ ಕ್ಷಣದಲ್ಲಿ ಸಚಿವ ಸಂಪುಟ ವಿಸ್ತರಣೆಗೆ ಬ್ರೇಕ್ ಬಿದ್ದಿರುವುದು ಸಚಿವ ಸ್ಥಾನ ಪಟ್ಟಕ್ಕೇರಲು ಮುಂದಾದದವರಿಗೆ ನಿರಾಸೆ ಮೂಡಿಸಿದ್ದರೆ, ಮತ್ತೊಂದೆಡೆ ನೂತನ ಸಚಿವರ ಪಟ್ಟಿ ಅಂತಿಮವಾಗಿರಲಿಲ್ಲವಾಗಿತ್ತು. ಆದರೂ ಶೀಘ್ರದಲ್ಲೇ ಸಚಿವರ ಪಟ್ಟಿಯನ್ನು ಅಂತಿಮಗೊಳಿಸಿ ಸಚಿವ ಸಂಪುಟ ವಿಸ್ತರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಬುಧವಾರ ಬೆಳಿಗ್ಗೆ ರೇಸ್‌ಕೋರ್ಸ್‌ನ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಚಿವರ ಪಟ್ಟಿ ಅಂತಿಮವಾಗಿಲ್ಲದಿರುವುದರಿಂದ ಬುಧವಾರ ನಡೆಯಬೇಕಿದ್ದ ಸಚಿವರ ಪ್ರಮಾಣವಚನ ಕಾರ್ಯಕ್ರಮವನ್ನು ರದ್ದುಪಡಿಸಿರುವುದಾಗಿ ಹೇಳಿದರು.

ಸಚಿವ ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು ಎಂಬ ಪಕ್ಷ ಪಕ್ಷದ ವರಿಷ್ಠರಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಪಕ್ಷದ ಮುಖಂಡರು ಪ್ರವಾಸದಲ್ಲಿರುವುದರಿಂದ ನವದೆಹಲಿಗೆ ತೆರಳುವ ಕಾರ್ಯಕ್ರಮ ಕೂಡ ಮುಂದಕ್ಕೆ ಹಾಕಲಾಗಿದೆ. ಅವರೆಲ್ಲ ವಾಪಸ್ ಬಂದ ಕೂಡಲೇ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಈ ಸಂದರ್ಭದಲ್ಲಿ ತಿಳಿಸಿದರು.

ಬುಧವಾರ ಸಚಿವ ಸಂಪುಟ ವಿಸ್ತರಣೆ ಮಾಡಲು ಮುಖ್ಯಮಂತ್ರಿಗಳು ನಿರ್ಧರಿಸಿದ್ದು, ಪಕ್ಷೇತರ ಶಾಸಕರ ವರ್ತೂರು ಪ್ರಕಾಶ್ ಹಾಗೂ ಸುರಪುರ ಶಾಸಕ ರಾಜೂ ಗೌಡ ಪ್ರಮಾಣವಚನ ಸ್ವೀಕರಿಸುವಂತೆ ಸೂಚನೆ ನೀಡಿದ್ದರು. ಈ ಇಬ್ಬರಿಗೆ ಸಚಿವ ಪಟ್ಟ ನೀಡುತ್ತಿರುವ ಬಗ್ಗೆ ಪಕ್ಷದಲ್ಲಿ ಭಾರೀ ಆಕ್ಷೇಪ ವ್ಯಕ್ತವಾಗಿತ್ತು. ಕೆಲವರು ರಾಜೀನಾಮೆ ಬೆದರಿಕೆ ಕೂಡ ಹಾಕಿದರು. ಆ ನೆಲೆಯಲ್ಲಿ ರಾಜ್ಯಾಧ್ಯಕ್ಷ ಈಶ್ವರಪ್ಪ ಅವರು ಸಚಿವ ಸಂಪುಟ ವಿಸ್ತರಣೆ ಕಾರ್ಯಕ್ರಮವನ್ನು ದಿಢೀರ್ ಆಗಿ ರದ್ದುಗೊಳಿಸಿರುವುದಾಗಿ ಘೋಷಿಸಿದ್ದರು.

ಇತ್ತೀಚೆಗಷ್ಟೇ ಸಚಿವ ಸಂಪುಟ ವಿಸ್ತರಣೆಗೆ ಮುಂದಾದ ಸಂದರ್ಭದಲ್ಲಿ ಪಕ್ಷದೊಳಗೆ ಸಚಿವ ಸ್ಥಾನ ಆಕಾಂಕ್ಷಿಗಳ ಅಸಮಾಧಾನ ಬಂಡಾಯದಿಂದಾಗಿ ಹಲವು ಶಾಸಕರು ಸರಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದಿದ್ದರು. ಅದರ ಪರಿಣಾಮ ಎಂಬಂತೆ ಮುಖ್ಯಮಂತ್ರಿ ಯಡಿಯೂರಪ್ಪ ವಿಧಾನಸಭೆಯಲ್ಲಿ ಎರಡು ಬಾರಿ ನಡೆದ ಬಹುಮತ ಸಾಬೀತಿನಲ್ಲಿ ಗೆಲುವು ಸಾಧಿಸಿದ್ದರು. ಇದೀಗ ಸಂಪುಟದಲ್ಲಿ ಆರು ಸಚಿವ ಸ್ಥಾನ ಖಾಲಿ ಇದ್ದು, ಅದರಲ್ಲಿ ನಾಲ್ಕು ಸ್ಥಾನಕ್ಕೆ ಸಚಿವರನ್ನು ನೇಮಕ ಮಾಡಲು ಸಿಎಂ ನಿರ್ಧರಿಸಿದ್ದರು. ಆದರೆ ಇದು ಪಕ್ಷದೊಳಗೆ ಮತ್ತೆ ಭಿನ್ನಮತಕ್ಕೆ ಕಾರಣವಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ