ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ನನಗೆ ಮಂತ್ರಿ ಪದವಿ ಗ್ಯಾರಂಟಿ: ವರ್ತೂರು ಪ್ರಕಾಶ್ (Prakash | Bangalore | BJP | Yeddyurappa | Ishwarappa)
Bookmark and Share Feedback Print
 
ಕೊನೆಯ ಕ್ಷಣದಲ್ಲಿ ಸಚಿವ ಸಂಪುಟ ವಿಸ್ತರಣೆಯನ್ನು ರದ್ದುಪಡಿಸಿರುವುದರಿಂದ ನಿರಾಸೆಗೊಂಡಿದ್ದ ಪಕ್ಷೇತರ ಶಾಸಕ ವರ್ತೂರು ಪ್ರಕಾಶ್ ಬುಧವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ನನ್ನ ಕೈಬಿಡುವುದಿಲ್ಲ, ದೀಪಾವಳಿ ನಂತರ ಅಥವಾ ಅದಕ್ಕೂ ಮುನ್ನ ಮಂತ್ರಿ ಸ್ಥಾನ ನೀಡುವುದು ಖಚಿತ ಎಂದು ಭರವಸೆ ನೀಡಿದ್ದಾರೆ. ನನಗೆ ಯಡಿಯೂರಪ್ಪ, ಈಶ್ವರಪ್ಪ ಹಾಗೂ ಸಂಸದ ಅನಂತಕುಮಾರ್ ಅವರ ಮೇಲೆ ಸಂಪೂರ್ಣ ನಂಬಿಕೆ ಇದೆ ಎಂದು ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದ್ದಾರೆ.

ವರ್ತೂರು ಪ್ರಕಾಶ್ ಅನರ್ಹಗೊಳಿಸಲು ಒತ್ತಾಯ: ಕ್ಷೇತ್ರದ ಅಭಿವೃದ್ಧಿಯನ್ನು ಕಡೆಗಣಿಸಿ ಹಣ ಹಾಗೂ ಅಧಿಕಾರ ದಾಹಕ್ಕಾಗಿ ಪಕ್ಷದಿಂದ ಪಕ್ಷಕ್ಕೆ ಜಿಗಿಯುತ್ತಿರುವ ವರ್ತೂರು ಪ್ರಕಾಶ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕೆಂದು ಒತ್ತಾಯಿಸಿ ಕೋಲಾರದ ರಾಮಚಂದ್ರ ಸ್ಪೀಕರ್ ಬೋಪಯ್ಯ ಅವರಿಗೆ ದೂರು ನೀಡಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ