ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಿಜೆಪಿ ಕುದುರೆ ವ್ಯಾಪಾರ; ತನಿಖೆ ಆರಂಭಿಸಿದ ಲೋಕಾಯುಕ್ತ (BJP | Lokayuktha | Karnataka | Karnataka Politics)
Bookmark and Share Feedback Print
 
ರಾಜ್ಯ ರಾಜಕೀಯದಲ್ಲಿ ಇತ್ತೀಚೆಗೆ ಬಿಜೆಪಿ ನಡೆಸಿರುವ ಕುದುರೆ ವ್ಯಾಪಾರ ಮೂಲಕ ಶಾಸಕರ ಖರೀದಿ ಮತ್ತು ಆಪರೇಷನ್ ಕಮಲ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ದಳ ತನಿಖೆ ಆರಂಭಿಸಿದೆ.

ಆಡಳಿತಾರೂಢ ಬಿಜೆಪಿ ಪಕ್ಷ ತನ್ನ ಅಧಿಕಾರವನ್ನು ಉಳಿಸಿಕೊಳ್ಳಲು ಪ್ರತಿಪಕ್ಷಗಳ ಶಾಸಕರನ್ನು ಭಾರಿ ಮೊತ್ತ ನೀಡಿ ಖರೀದಿಸಿವೆ ಎಂದು ಪ್ರತಿಪಕ್ಷಗಳು ಆರೋಪಿಸಿದ್ದರು.

ಆಪರೇಷನ್ ಕಮಲದ ಮೂಲಕ ಪ್ರತಿಪಕ್ಷದ ಶಾಸಕರನ್ನು ಸೆಳೆದುಕೊಳ್ಳಲು ಬಿಜೆಪಿ ಯಶಸ್ವಿಯಾಗಿತ್ತು. ಇಬ್ಬರು ಕಾಂಗ್ರೆಸ್‌ನ ಹಾಗೂ ಜೆಡಿಎಸ್‌ನ ಒಬ್ಬ ಶಾಸಕ ಇದಕ್ಕೆ ಬಲಿಯಾಗಿದ್ದರು. ಕಾಂಗ್ರೆಸ್‌ನ ಬಗಳೂರು ಶಾಸಕ ರಾಮಚಂದ್ರ ಮತ್ತು ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ ಮತ್ತು ಜೆಡಿಎಸ್ ಚನ್ನಪಟ್ಟಣ ಶಾಸಕ ಅಶ್ವತ್ಥ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರಿಕೊಂಡಿದ್ದರು.

ರಾಜ್ಯ ಸರಕಾರವು ತನ್ನ ಆಡಳಿತ ಉಳಿಸಿಕೊಳ್ಳಲು ಪ್ರತಿಪಕ್ಷಗಳ ಶಾಸಕರನ್ನು ದುಡ್ಡು ನೀಡಿ ಖರೀದಿಸಿವೆ ಎಂದು ಆರೋಪಿಸಿ ಜೆಡಿಎಸ್‌ನ ರೇಮ್ ಗೌಡ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ತನಿಖೆ ಆರಂಭಿಸಲಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ಸಂತೋಷ್ ಹೆಗ್ಡೆ ತಿಳಿಸಿದ್ದಾರೆ. ಆಪರೇಷನ್ ಕಮಲ ಆರೋಪಕ್ಕೆ ಪುಷ್ಠಿ ನೀಡುವ ಸಿಡಿಯೊಂದು ಕೂಡಾ ಲಭಿಸಿದ್ದು, ಇದರ ಬಗ್ಗೆಯೂ ಕೂಲಂಕುಷ ತನಿಖೆ ನಡೆಯಲಿದೆ ಎಂದವರು ತಿಳಿಸಿದರು.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ 'ವೆಬ್‌ದುನಿಯಾ'ವನ್ನು ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಸಂಬಂಧಿತ ಮಾಹಿತಿ ಹುಡುಕಿ