ಸಚಿವ ಸಂಪುಟ ವಿಸ್ತರಣೆಯನ್ನು ಅನಿರ್ಧಿಷ್ಠಾವಧಿಗೆ ಮುಂದೂಡಿಕೆಗೆ, ಪಕ್ಷದ ಆಂತರಿಕ ಭಿನ್ನಾಭಿಪ್ರಾಯ ಕಾರಣವೆಂದು ಬಿಜೆಪಿ ಹೇಳಿಕೆ ನೀಡಿದೆ.ಆದರೆ, ಪಕ್ಷದಲ್ಲಿ ಯಾವುದೇ ರೀತಿಯ ಭಿನ್ನಮತವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ಅಧ್ಯಕ್ಷ ಈಶ್ವರಪ್ಪ, ಸಚಿವ ಸ್ಥಾನದ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿರುವುದರಿಂದ ಪಕ್ಷದಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಭಿನ್ನಮತವಿದೆ. ಆದ್ದರಿಂದ ಸಚಿವ ಸಂಪುಟ ವಿಸ್ತರಣೆ ಮುಂದೂಡಲಾಗಿದೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ, ಪಕ್ಷದಲ್ಲಿ ಭಿನ್ನಮತ ಎನ್ನುವುದೇ ಇಲ್ಲ. ಪಕ್ಷ ಅಧಿಕಾರಕ್ಕೆ ಬಂದಾಗಿನಿಂದಲೂ ವಿರೋಧ ಪಕ್ಷಗಳು ಪಕ್ಷದಲ್ಲಿ ಒಳಜಗಳವಿದೆ.ಭಿನ್ನಮತವಿದೆ ಎಂದು ಪ್ರಸ್ತಾಪಿಸುತ್ತಿವೆ ಎಂದು ಅಸಮಧಾನ ವ್ಯಕ್ತಪಡಿಸಿದರು.