ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಗಣಿ ಲೂಟಿಯಲ್ಲಿ 'ನಮ್ಮವರೂ' ಶಾಮೀಲಾಗಿದ್ದಾರೆ: ಸಿಎಂ (BJP | Yeddyurappa | Congess | Mandya | JDS | Bhagya laxmi)
Bookmark and Share Feedback Print
 
ಅಕ್ರಮ ಅದಿರು ಲೂಟಿಯಲ್ಲಿ ಬಿಜೆಪಿ ಸೇರಿದಂತೆ ಎಲ್ಲಾ ಪಕ್ಷದವರೂ ಶಾಮೀಲಾಗಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತೊಮ್ಮೆ ಗಣಿ ಲೂಟಿಕೋರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೋಮವಾರ ಜೆಡಿಎಸ್‌ನ ತೀವ್ರ ವಿರೋಧದ ನಡುವೆಯೂ ವಿಶ್ವೇಶ್ವರಯ್ಯ ಸ್ಟೇಡಿಯಂನಲ್ಲಿ ಭಾಗ್ಯಲಕ್ಷ್ಮಿ ಯೋಜನೆ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಭಾಗ್ಯಲಕ್ಷ್ಮಿ ಯೋಜನೆಯಡಿಯಲ್ಲಿ ಬಡವರಿಗೆ ಸೀರೆ ಹಂಚುತ್ತಿರುವುದು ಯಾವುದೇ ಚುನಾವಣೆ ಗಿಮಿಕ್ ಅಲ್ಲ. ತಾನು ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ ಪ್ರತಿವರ್ಷ ಸೀರೆ ಹಂಚುವ ಕಾರ್ಯಕ್ರಮ ನಡೆಸುವುದಾಗಿ ಈ ಸಂದರ್ಭದಲ್ಲಿ ಘೋಷಿಸಿದರು.

ಬಳ್ಳಾರಿ, ಚಿತ್ರದುರ್ಗ, ತುಮಕೂರುಗಳಲ್ಲಿ ಅದಿರನ್ನು ಲೂಟಿ ಮಾಡಲಾಗುತ್ತಿದೆ. ಕಬ್ಬಿಣದ ಅದಿರನ್ನು ರಕ್ಷಿಸಬೇಕಾಗಿದ್ದು ನಮ್ಮ ಕರ್ತವ್ಯವಾಗಿದೆ. ಆದರೆ ಬಿಜೆಪಿಯವರು ಸೇರಿದಂತೆ ಎಲ್ಲಾ ಪಕ್ಷದವರೂ ಅದಿರು ಲೂಟಿಯಲ್ಲಿ ತೊಡಗಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿ ವಾಗ್ದಾಳಿ ನಡೆಸಿದರು.

ನಾಡಿನ ಅಮೂಲ್ಯ ಸಂಪತ್ತನ್ನು ರಕ್ಷಿಸುವ ನಿಟ್ಟಿನಲ್ಲಿ ನಾನು ಅಕ್ರಮ ಅದಿರು ಲೂಟಿ ತಡೆಗೆ ಕ್ರಮ ಕೈಗೊಂಡಿದ್ದರ ಪರಿಣಾಮವೇ ನನ್ನ ಕುರ್ಚಿಯನ್ನು ಅಲುಗಾಡಿಸುವ ಪ್ರಯತ್ನ ನಡೆಯುತ್ತಿದೆ. ಹಾಗಾಗಿ ತಾಯಂದಿರು ನನ್ನ ಮನದಾಳವನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಸಮಾರಂಭದಲ್ಲಿ ಮನವಿ ಮಾಡಿಕೊಂಡರು.

ಅಭಿವೃದ್ಧಿ ಕಾರ್ಯವಿರಲಿ ಅಥವಾ ಭಾಗ್ಯಲಕ್ಷ್ಮಿ ಯೋಜನೆ ಯಾವುದೇ ಇರಲಿ ವಿಪಕ್ಷಗಳ ಅಡ್ಡಿ ಆತಂಕಗಳಿಗೆ ಹೆದರುವ ಪ್ರಶ್ನೆಯೇ ಇಲ್ಲ ಎಂದು ತಿರುಗೇಟು ನೀಡಿದ ಮುಖ್ಯಮಂತ್ರಿಗಳು, ಇಂದಿನ ಕಾರ್ಯಕ್ರಮದ ನೆನಪಿಗಾಗಿ ಮಂಡ್ಯದಲ್ಲಿ ಸುಮಾರು 30 ಕೋಟಿ ರೂಪಾಯಿ ವೆಚ್ಚದಲ್ಲಿ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಕಟ್ಟುವುದಾಗಿ ಭರವಸೆ ನೀಡಿದರು.

ಜೆಡಿಎಸ್‌ನಿಂದ ಅಡ್ಡಿ-ನೂರಾರು ಕಾರ್ಯಕರ್ತರ ಬಂಧನ: ಮಹಿಳೆಯರಿಗೆ ಸೀರೆ ಹಂಚು ಕಾರ್ಯಕ್ರಮಕ್ಕೆ ಜೆಡಿಎಸ್ ತೀವ್ರ ವಿರೋಧ ಒಡ್ಡಿ ಪ್ರತಿಭಟನೆ ನಡೆಸಿದ್ದರ ನಡುವೆಯೂ ಮುಖ್ಯಮಂತ್ರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಾಂಡ್ ಹಾಗೂ ಸೀರೆಗಳನ್ನು ಹಂಚಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಅಡ್ಡಿ ಪಡಿಸಲು ಯತ್ನಿಸಿದ್ದ ಜೆಡಿಎಸ್‌ನ ಐವರು ಶಾಸಕರು ಸೇರಿದಂತೆ ನೂರಾರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

ಒಂದು ಹಂತದಲ್ಲಿ ಪರಿಸ್ಥಿತಿಯನ್ನು ತಿಳಿಗೊಳಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಭಾಗ್ಯಲಕ್ಷ್ಮಿ ಯೋಜನೆಯಡಿಯಲ್ಲಿ ಸೀರೆ ಹಂಚಿಕೆ ಕಾರ್ಯಕ್ರಮ ವಿರೋಧಿಸಿ ಜೆಡಿಎಸ್ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.
ಸಂಬಂಧಿತ ಮಾಹಿತಿ ಹುಡುಕಿ