ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಯಡಿಯೂರಪ್ಪ ನಾಯಕತ್ವ ಬದಲಾವಣೆ ಖಚಿತ:ಜಾರಕಿಹೋಳಿ (Yediyurappa | Balachandra jarakiholi | Government)
Bookmark and Share Feedback Print
 
ಸುಪ್ರೀಂ ಕೋರ್ಟ್ ತೀರ್ಪು ನಮ್ಮ ಪರ ವಾಲಿದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಯಕತ್ವ ಬದಲಾವಣೆ ಖಚಿತ ಎಂದು ಭಿನ್ನರ ಗುಂಪಿನ ನಾಯಕ ಬಾಲಚಂದ್ರ ಜಾರಕಿಹೋಳಿ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಮತ್ತು ಅಧಿಕಾರದ ಮದದಿಂದ ಮೆರೆಯುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ತಕ್ಕ ಪಾಠ ಕಲಿಸಲಾಗುವುದು. ಬಿಜೆಪಿ ಪಕ್ಷವನ್ನು ನಂಬಿದ ಪಕ್ಷೇತರ ಶಾಕರನ್ನು ಅನರ್ಹಗೊಳಿಸಿ, ವಿಶ್ವಾಸಘಾತವೆಸಗಿದ್ದಾರೆ ಎಂದು ಕಿಡಿಕಾರಿದರು.

ಯಡಿಯೂರಪ್ಪ ಸ್ಥಾನದಲ್ಲಿ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಜಗದೀಶ್ ಶೆಟ್ಟರ್ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಭವಿಷ್ಯ ನುಡಿದರು.

ರಾಜಕೀಯ ಬಿಕ್ಕಟ್ಟಿನಿಂದಾಗಿ, ಕ್ಷೇತ್ರದ ಮತದಾರರನ್ನು ಭೇಟಿ ಮಾಡದಿರುವುದಕ್ಕೆ ಜನತೆಯಲ್ಲಿ ಕ್ಷಮೆಯಾಚಿಸಿದ ಜಾರಕಿಹೋಳಿ, ಇಂತಹ ಭ್ರಷ್ಟ ಮುಖ್ಯಮಂತ್ರಿಯಿಂದ ರಾಜ್ಯದ ಅಭಿವೃದ್ಧಿ ಅಸಾಧ್ಯ. ಮುಖ್ಯಮಂತ್ರಿ ಹಾಗೂ ಅವರ ಮಕ್ಕಳು ರಾಜ್ಯದ ಸಂಪತ್ತಿನ ಲೂಟಿಯಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದರು.

ಶಿವಮೊಗ್ಗ ಜಿಲ್ಲೆಯನ್ನು ಸಂಪೂರ್ಣವಾಗಿ ಲೂಟಿ ಮಾಡಿದ ಮುಖ್ಯಮಂತ್ರಿ ಹಾಗೂ ಅವರ ಕುಟುಂಬ ಇನ್ನು ಕೆಲ ದೀನಗಳ ಕಾಲ ಅಧಿಕಾರದಲ್ಲಿ ಮುಂದುವರಿದಲ್ಲಿ ರಾಜ್ಯವನ್ನೇ ಲೂಟಿ ಮಾಡುತ್ತಾರೆ ಎಂದು ಭಿನ್ನರ ಗುಂಪಿನ ನಾಯಕ ಬಾಲಚಂದ್ರ ಜಾರಕಿಹೋಳಿ ಲೇವಡಿ ಮಾಡಿದರು.
ಸಂಬಂಧಿತ ಮಾಹಿತಿ ಹುಡುಕಿ