ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ನಾನು ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಯಲ್ಲ: ಜಗದೀಶ್ ಶೆಟ್ಟರ್ (Jagadish Shettar | BJP | Janardana Reddy | Ananth kumar | Jaraki holi)
Bookmark and Share Feedback Print
 
ನಾನು ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಯಲ್ಲ. ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿಯವರು ಗೊಂದಲ ಸೃಷ್ಟಿಸುವುದಕ್ಕಾಗಿ ಈ ರೀತಿಯ ಹೇಳಿಕೆ ನೀಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಜಗದೀಶ ಶೆಟ್ಟರ್ ತಿಳಿಸಿದ್ದಾರೆ.

ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಲಚಂದ್ರ ಹೇಳಿಕೆಗೆ ಅಷ್ಟೊಂದು ಮಹತ್ವವಿಲ್ಲ. ಬಿಜೆಪಿಯಲ್ಲಿ ಭಿನ್ನಮತವಿಲ್ಲ, ನಾವು ಯಡಿಯೂರಪ್ಪನವರ ನಾಯಕತ್ವದಲ್ಲಿ ಐದು ವರ್ಷ ಅಧಿಕಾರ ಪೂರ್ಣಗೊಳಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.

ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಕಾರ್ಯಕಾರಿಣಿ ಸಭೆಯಿಂದ ಅನಂತಕುಮಾರ, ರೆಡ್ಡಿ ಸಹೋದರರು ದೂರ ಉಳಿದ ಬಗ್ಗೆ ಇಲ್ಲಸಲ್ಲದ ಸಂಶಯಪಡುವುದರಲ್ಲಿ ಅರ್ಥವಿಲ್ಲ ಎಂದರು.

ಅನಂತಕುಮಾರ ಅವರಿಗೆ ಬಿಹಾರ ಚುನಾವಣೆ ಉಸ್ತುವಾರಿ ವಹಿಸಲಾಗಿದ್ದು, ಅವರು ಆ ರಾಜ್ಯದಲ್ಲಿ ಕಾರ್ಯ ನಿರತರಾಗಿದ್ದಾರೆ. ಪೂರ್ವ ನಿಯೋಜನೆಯಂತೆ ಶ್ರೀರಾಮುಲು ಮತ್ತು ರೆಡ್ಡಿ ಸಹೋದರರು ತಮ್ಮ, ತಮ್ಮ ಕಾರ್ಯಕ್ರಮದಲ್ಲಿ ನಿರತರಾಗಿದ್ದರು. ಬಿಜೆಪಿಯಲ್ಲಿ ಗುಂಪುಗಾರಿಕೆ ಇದೆ ಎಂಬುದು ಕೇವಲ ಊಹಾಪೋಹ ಅಷ್ಟೇ. ರಾಜ್ಯವನ್ನು ಅಭಿವೃದ್ದಿಯತ್ತ ಕೊಂಡೊಯ್ಯುವುದೇ ನಮ್ಮ ಮುಖ್ಯ ಗುರಿ ಎಂದರು.
ಸಂಬಂಧಿತ ಮಾಹಿತಿ ಹುಡುಕಿ