ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಮೀಸಲಾತಿ ಸುಗ್ರೀವಾಜ್ಞೆ ವಾಪಸ್ ಪಡೆಯಲ್ಲ: ಗವರ್ನರ್ (Bharadwaj | BJP | Yeddyurappa | Congress | JDS)
Bookmark and Share Feedback Print
 
ಸ್ಥಳೀಯ ಸಂಸ್ಥೆಗಳಲ್ಲಿ ಒಟ್ಟು ಮೀಸಲಾತಿ ಶೇ.50 ಮೀರಬಾರದು ಎಂದು ಕಳೆದ ತಿಂಗಳ 4ರಂದು ಹೊರಡಿಸಿದ್ದ ಸುಗ್ರೀವಾಜ್ಞೆಯನ್ನು ಹಿಂದಕ್ಕೆ ಪಡೆಯುವ ರಾಜ್ಯ ಸರಕಾರದ ಪ್ರಸ್ತಾಪವನ್ನು ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಗುರುವಾರ ವಾಪಸ್ ಕಳುಹಿಸಿದ್ದಾರೆ.

ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಸುಗ್ರೀವಾಜ್ಞೆಯನ್ನು ಹೊರಡಿಸಲಾಗಿದೆ. ಈಗ ವಾಪಸ್ ಪಡೆದರೆ ನ್ಯಾಯಾಂಗ ನಿಂದನೆಯಾಗುತ್ತದೆ. ಹೀಗಾಗಿ ವಾಪಸ್ ಪಡೆಯಲು ಒಪ್ಪಿಗೆ ನೀಡಲಾಗದು ಎಂದು ಹೇಳಿದ್ದಾರೆ ಎಂದು ಕಾನೂನು ಇಲಾಖೆ ಮೂಲಗಳು ತಿಳಿಸಿವೆ. ವಿಧಾನಮಂಡಲದ ಅಧಿವೇಶನ ಕರೆದು, ಸದನದಲ್ಲಿಯೇ ಈ ಕುರಿತು ಸೂಕ್ತ ತೀರ್ಮಾನವನ್ನು ತೆಗೆದುಕೊಳ್ಳಿ ಎಂದು ಅವರು ಸಲಹೆ ನೀಡಿದ್ದಾರೆ.

ಸುಗ್ರೀವಾಜ್ಞೆ ಹೊರಡಿಸುವಾಗಲೇ ಅದರ ಸಾಧಕ-ಬಾಧಕಗಳ ಬಗ್ಗೆ ಸಮಾಲೋಚಿಸಬೇಕಾಗಿತ್ತು. ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಸುಗ್ರೀವಾಜ್ಞೆ ಹೊರಡಿಸಬೇಕು ಎಂದು ಹಿಂದೆ ಮನವಿ ಮಾಡಲಾಗಿತ್ತು. ಈಗ ನೀವೇ ವಾಪಸ್ ಪಡೆಯಲು ಅವಕಾಶ ಕೊಡಿ ಎಂದು ಕೇಳಿದ್ದೀರಿ, ಇದು ಹೇಗೆ ಸಾಧ್ಯ ಎಂದು ರಾಜ್ಯಪಾಲರು ಪ್ರಶ್ನಿಸಿದ್ದಾರೆ.

ರಾಜ್ಯಪಾಲರ ಕ್ರಮಕ್ಕೆ ಪ್ರತಿಕ್ರಿಯೆ ಇಲ್ಲ-ಸಿಎಂ: ಮೀಸಲಾತಿ ಕುರಿತು ಹೊರಡಿಸಿದ್ದ ಸುಗ್ರೀವಾಜ್ಞೆಯನ್ನು ವಾಪಸ್ ಪಡೆಯಲು ಸಾಧ್ಯವಿಲ್ಲ ಎಂದು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರ ಕ್ರಮಕ್ಕೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ