ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಉಗ್ರರ ದಮನಕ್ಕೆ ವಿಶೇಷ ಕಮಾಂಡೋ ಪಡೆ: ಅಶೋಕ್ (NSG | Ashok | Naxal | Karnataka | Police)
Bookmark and Share Feedback Print
 
ಉಗ್ರರ ಕೃತ್ಯಗಳನ್ನು ತಡೆಯುವ ನಿಟ್ಟಿನಲ್ಲಿ ರಾಷ್ಟ್ರೀಯ ಭದ್ರತಾ ಪಡೆ (ಎನ್‌ಎಸ್‌ಜಿ) ಮಾದರಿಯಲ್ಲಿ ರಾಜ್ಯದಲ್ಲಿ ವಿಶೇಷ ಕಮಾಂಡೋ ಪಡೆ ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಆರ್.ಅಶೋಕ ತಿಳಿಸಿದ್ದಾರೆ.

ಭಯೋತ್ಪಾದನೆ, ನಕ್ಸಲೀಯ ಚಟುವಟಿಕೆ ಸೇರಿದಂತೆ ಅಪರಾಧ ಕೃತ್ಯಗಳ ಮೇಲೆ ಕಡಿವಾಣ ಹಾಕಲು ಪ್ರತ್ಯೇಕ ಕಮಾಂಡೋ ಪಡೆ ಆರಂಭಿಸಲಾಗುತ್ತದೆ. ಇದರ ಸೇವೆ ಇಡೀ ರಾಜ್ಯದಲ್ಲಿ ದೊರಕಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಕರ್ನಾಟಕದಲ್ಲಿ ಎನ್ಎಸ್‌ಜಿ ಘಟಕ ಸ್ಥಾಪಿಸಲು ಕೇಂದ್ರ ಸರಕಾರ ಹಿಂದೇಟು ಹಾಕುತ್ತಿರುವುದು ಅಸಮಾಧಾನ ವ್ಯಕ್ತಪಡಿಸಿದ ಸಚಿವರು , ರಾಜ್ಯದ ಸುರಕ್ಷತೆ ದೃಷ್ಟಿಯಿಂದ ಇಲಾಖೆ ಎಲ್ಲ ಕ್ರಮ ಕೈಗೊಳ್ಳಲು ಸಮರ್ಥವಾಗಿದೆ. ನಮ್ಮ ಕಮಾಂಡೋ ಪಡೆ ಯಾವ ರೀತಿ ಇರಬೇಕು ಎನ್ನುವ ಬಗ್ಗೆ ಇಂಥ ಪಡೆ ಹೊಂದಿರುವ ಬೇರೆ ರಾಜ್ಯಗಳಿಂದ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಹೇಳಿದರು.

ಕಮಾಂಡೋ ಪಡೆ ಕೇವಲ ಬೆಂಗಳೂರಿಗೆ ಸೀಮಿತವಾಗಿರುವುದಿಲ್ಲ. ರಾಜ್ಯದ ಎಲ್ಲಾದರೂ ತುರ್ತು ಅಗತ್ಯವಿದ್ದಲ್ಲಿ ಇದರ ಸೇವೆ ಪಡೆಯಲಾಗುವುದು. ಉಗ್ರವಾದಿ ಹಾಗೂ ನಕ್ಸಲ್ ಚಟುವಟಿಕೆಗಳನ್ನು ಕಡಿವಾಣ ಹಾಕಲು ವಿಶೇಷ ಕ್ರಮ ಕೈಗೊಳ್ಳಲಾಗುತ್ತಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಕರ್ನಾಟಕ ಪೊಲೀಸ್ ಸಾಕಷ್ಟು ಪವರ್‌ಫುಲ್ ಇದೆ ಎಂದರು.

ಹೊಸ ಕಾಯ್ದೆ ಪೊಲೀಸ್ ಇಲಾಖೆಗೆ ಕಾಯಕಲ್ಪ ನೀಡಲು ನಿರ್ಧರಿಸಿದ್ದು, ಇದಕ್ಕಾಗಿ ಅಗತ್ಯ ಕಾಯ್ದೆ ರೂಪಿಸಲಾಗುತ್ತಿದೆ. ಈ ಸಂಬಂಧ ಕರಡು ಸಿದ್ಧಪಡಿಸಲಾಗುತ್ತಿದ್ದು, ಪ್ರಕ್ರಿಯೆ ಮುಗಿದ ಮೇಲೆ ಸದನದಲ್ಲಿ ಮಂಡಿಸಲಾಗುವುದು. ಈಗಿನ ಸಮಸ್ಯೆ, ಸವಾಲು ಹೇಗೆ ಎದುರಿಸಬಹುದು ಎಂಬುದಕ್ಕೆ ಪೂರಕವಾಗಿ ಹೊಸ ಕಾಯ್ದೆ ಜಾರಿಗೆ ಬರಲಿದೆ ಎಂದರು.
ಸಂಬಂಧಿತ ಮಾಹಿತಿ ಹುಡುಕಿ