ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಪಕ್ಷೇತರರ ಅನರ್ಹತೆ; ಸೋಮವಾರ ಹೈಕೋರ್ಟ್ ತೀರ್ಪು (High court | BJP | Yeddyurappa | Independent MLA | Congress)
Bookmark and Share Feedback Print
 
NRB
ಪಕ್ಷೇತರ ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಮಧ್ಯಂತರ ಅರ್ಜಿಯ ವಿಚಾರಣೆ ಶುಕ್ರವಾರ ಪೂರ್ಣಗೊಂಡಿದ್ದು, ವಾದ-ಪ್ರತಿವಾದ ಆಲಿಸಿದ ನಂತರ ತೀರ್ಪು ಕಾಯ್ದಿರಿಸಿರುವ ಹೈಕೋರ್ಟ್ ಪೀಠ ಸೋಮವಾರ ಅಂತಿಮ ಆದೇಶ ನೀಡುವುದಾಗಿ ತಿಳಿಸಿದೆ.

ಇಂದು ನಡೆದ ವಿಚಾರಣೆ ಸಂದರ್ಭ, ಪಕ್ಷೇತರ ಶಾಸಕರನ್ನು ಅನರ್ಹಗೊಳಿಸಿರುವ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಂವಿಧಾನ ಬದ್ಧವಾಗಿಯೇ ಪಕ್ಷೇತರ ಶಾಸಕರನ್ನು ಅನರ್ಹಗೊಳಿಸಲಾಗಿದೆ ಎಂದು ತಮ್ಮ ಕ್ರಮವನ್ನು ಸಭಾಧ್ಯಕ್ಷ ಕೆ.ಜಿ.ಬೋಪಯ್ಯ ಅವರು ಸಮರ್ಥಿಕೊಂಡು ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿದ್ದಾರೆ.

ಶಾಸಕರನ್ನು ಅನರ್ಹಗೊಳಿಸಿರುವ ಪ್ರಕರಣದಲ್ಲಿ ಅನಗತ್ಯವಾಗಿ ಪ್ರತಿವಾದಿಯನ್ನಾಗಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರು ಸಲ್ಲಿಸಿರುವ ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಹಾಗೂ ಸ್ಪೀಕರ್ ಬೋಪಯ್ಯ ಹೈಕೋರ್ಟ್ ನ್ಯಾಯಮೂರ್ತಿ ಮೋಹನ್ ಶಾಂತನಗೌಡರ್, ನ್ಯಾ.ಅಬ್ದುಲ್ ನಜೀರ್, ನ್ಯಾ.ಬೋಪಣ್ಣ ಅವರನ್ನೊಳಗೊಂಡ ತ್ರಿಸದಸ್ಯ ಪೀಠದ ಮುಂದೆ ಅಫಿಡವಿಟ್ ಸಲ್ಲಿಸಿದ್ದರು. ಮುಖ್ಯಮಂತ್ರಿ ಪರವಾಗಿ ವಕೀಲ ಎಂ.ಬಿ.ನರಗುಂದ ಹಾಗೂ ಬೋಪಯ್ಯ ಪರವಾಗಿ ಶಶಿಕಾಂತ ಅಫಿಡವಿಟ್ ಸಲ್ಲಿಸಿ, ವಾದ ಮಂಡಿಸಿದ್ದರು.

ಅನರ್ಹ ಶಾಸಕರ ಪರವಾಗಿ ಬಿ.ಪಿ.ರಾವ್ ವಾದ ಮಂಡಿಸಿ, ಪಕ್ಷೇತರ ಶಾಸಕರು ಯಾವುದೇ ಪಕ್ಷಕ್ಕೆ ಸೇರದಿರುವುದರಿಂದ ಪಕ್ಷಾಂತರ ನಿಷೇಧ ಕಾಯ್ದೆಯನ್ವಯ ಅನರ್ಹಗೊಳಿಸುವುದು ಸಂವಿಧಾನ ಬಾಹಿರ ಕ್ರಮ ಎಂದರು. ಇದಕ್ಕೆ ಪೂರಕವಾಗಿ ವಿವಿಧ ನ್ಯಾಯಾಲಯಗಳು ನೀಡಿರುವ ತೀರ್ಪನ್ನು ಉಲ್ಲೇಖಿಸಿದರು.

ಆ ನಿಟ್ಟಿನಲ್ಲಿ ಐವರು ಪಕ್ಷೇತರ ಶಾಸಕರ ಅನರ್ಹತೆ ಪ್ರಕರಣ ಕುರಿತಂತೆ ಮೂರು ಮಧ್ಯಂತರ ಅರ್ಜಿಯಗಳ ವಿಚಾರಣೆ, ವಾದ-ಪ್ರತಿವಾದ ಆಲಿಸಿದ ತ್ರಿಸದಸ್ಯ ಪೀಠ ತೀರ್ಪನ್ನು ಕಾಯ್ದಿರಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ