ಚಿಕ್ಕಬಳ್ಳಾಪುರ, ಮಂಗಳವಾರ, 16 ನವೆಂಬರ್ 2010( 10:25 IST )
ರಾಜ್ಯದಲ್ಲಿ ಈ ಹಿಂದೆ ಆಡಳಿತ ನಡೆಸುತ್ತಿದ್ದ ಎಸ್.ಎಂ.ಕೃಷ್ಣ ನೇತೃತ್ವದ ಸರಕಾರ ಅಭಿವೃದ್ಧಿಯಲ್ಲಿ ನಂ.1 ಪಟ್ಟ ಗಳಿಸಿದ್ದರೆ, ಈಗ ಆಡಳಿತ ನಡೆಸುತ್ತಿರುವ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಭ್ರಷ್ಟಾಚಾರದಲ್ಲಿ ಮತ್ತು ಹಗರಣದಲ್ಲಿ ನಂ.1 ಪಟ್ಟ ಗಳಿಸಿದೆ ಎಂದು ಕೆಪಿವೈಸಿಸಿ ಅಧ್ಯಕ್ಷ ಕೃಷ್ಣ ಬೈರೇಗೌಡ ಆರೋಪಿಸಿದ್ದಾರೆ.
ನಗರದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜಕೀಯ ಇತಿಹಾಸದಲ್ಲಿಯೇ ಕಂಡು ಕೇಳರಿಯದ ರೀತಿಯಲ್ಲಿ ರಾಜಕೀಯ ಅಸ್ಥಿರತೆ ಉಂಟಾಗಿದ್ದು, ಈ ಅಸ್ಥಿರತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಕುರ್ಚಿ ವ್ಯಾಮೋಹವೇ ಕಾರಣ ಎಂದರು.
ಬಯಲುಸೀಮೆಯ 7 ಜಿಲ್ಲೆಗಳು ನೀರಾವರಿ ಸೌಲಭ್ಯಗಳಿಲ್ಲದೆ ತತ್ತರಿಸುತ್ತಿದ್ದರೂ ಸಹ ನೀರಾವರಿ ಸಮಸ್ಯೆಯನ್ನು ಬಗೆಹರಿಸುವ ಕೆಲಸ ಆಗಿಲ್ಲ ಎಂದು ದೂರಿದರು.
ಮುಂಬರುವ ಮುನ್ನ ನಗರದ ಪ್ರಮುಖ ರಸ್ತೆಗಳಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬೈಕ್ ರಾಲಿ ನಡೆಸಿ, ಕಾಂಗ್ರೆಸ ಪರ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ದೇಶದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ 120ನೇ ಜನ್ಮ ದಿನಾಚರಣೆಯನ್ನು ಸಹ ಆಚರಿಸಲಾಯಿತು.