ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಕುಟುಂಬ ಭೂ ಹಗರಣದ ಗಂಭೀರ ಆರೋಪ ಎದುರಿಸುತ್ತಿದ್ದು, ಬಿಜೆಪಿ ಮತ್ತು ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದಿರುವ ಅವರು ಇದೀಗ ವಶಪಡಿಸಿಕೊಂಡಿರುವ ಭೂಮಿ ವಾಪಸ್ ನೀಡಲು ನಿರ್ಧರಿಸಿರುವುದಾಗಿ ಹೇಳುವ ಮೂಲಕ ತಮ್ಮ ಅಧಿಕಾರಾವಧಿ ಪೂರ್ಣಗೊಳಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಪುತ್ರರ ವಿರುದ್ಧದ ಭೂ ಹಗರಣದ ಕುರಿತ ಎಲ್ಲಾ ದಾಖಲೆಗಳನ್ನು ತರಿಸಿಕೊಂಡಿರುವ ಬಿಜೆಪಿ ವರಿಷ್ಠರು ಗುರುವಾರ ದೆಹಲಿಯಲ್ಲಿ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ, ವಿಪಕ್ಷ ನಾಯಕಿ ಸುಷ್ಮಾ ಸ್ವರಾಜ್, ವೆಂಕಯ್ಯ ನಾಯ್ಡು, ಅನಂತ್ ಕುಮಾರ್ ಸಭೆಯಲ್ಲಿ ಭಾಗವಹಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಜ್ಯದಲ್ಲಿಯೂ ಹಾಗೂ ಸಂಸತ್‌ನಲ್ಲಿ ತೀವ್ರ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಆ ನಿಟ್ಟಿನಲ್ಲಿ ಬೀಸೋ ದೊಣ್ಣೆ ತಪ್ಪಿಸಿಕೊಳ್ಳಲು ಭೂ ಹಗರಣವನ್ನು ಕೂಡಲೇ ತನಿಖೆಗೆ ಒಪ್ಪಿಸಲು ನಿರ್ಧರಿಸಲು ಕ್ರಮಕೈಗೊಳ್ಳುವುದು. ಭೂ ಹಗರಣದಲ್ಲಿ ವಶಪಡಿಸಿಕೊಂಡ ಭೂಮಿಯನ್ನು ಯಡಿಯೂರಪ್ಪ ವಾಪಸ್ ಮಾಡುವಂತೆ ಯಡಿಯೂರಪ್ಪ ಅವರಿಗೆ ಸೂಚನೆ ನೀಡಲು ನಿರ್ಧಾರಿಸಿದ್ದರು. ಇದರಿಂದ ಮುಖ್ಯಮಂತ್ರಿ ರಾಜೀನಾಮೆಗೆ ಆಗ್ರಹಿಸುತ್ತಿರುವ ಪ್ರತಿಪಕ್ಷಗಳ ಬಾಯಿಮುಚ್ಚಿಸಲು ಬಿಜೆಪಿ ಪ್ರತಿತಂತ್ರ ಹೂಡಿದೆ. ಭೂ ಹಗರಣದ ಕುರಿತು ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಈಗಾಗಲೇ ಘೋಷಿಸಿದ್ದಾರೆ.
ಭೂ ಹಗರಣದ ಕುರಿತು ದೆಹಲಿಯಲ್ಲಿ ಸಭೆ, ಹಗರಣದ ಬಗ್ಗ ನ್ಯಾಯಾಂಗ ತನಿಖೆ, ಶೀಘ್ರವೇ ಆದೇಶ, ಯಡಿಯೂರಪ್ಪ ಭೂ ಹಗರಣ ವಿವಾದ, ಜಮೀನು ವಾಪಸ್ ನೀಡಲು ಸಿಎಂ ಚಿಂತನೆ. ದೆಹಲಿ ಬಿಜೆಪಿ ಮೂಲಗಳ ಹೇಳಿಕೆ. ಸಭೆಯಲ್ಲಿ ಬಿಜೆಪಿ ಮುಖಂಡರ ಸಭೆ, ಅಡ್ವಾಣಿ, ಸುಶ್ಮಾ, ವೆಂಕಯ್ಯ ನಾಯ್ಡ, ಅನಂತ್ ಕುಮಾರ್ ಪಾಲ್ಗೊಂಡಿದ್ದಾರೆ.
ಪ್ರಪ್ರಥಮ ಬಾರಿಗೆ ದಕ್ಷಿಣ ಭಾರತದಲ್ಲಿ ಅಧಿಕಾರದ ಗದ್ದುಗೆ ಹಿಡಿದಿರುವ ಬಿಜೆಪಿ ಸರಕಾರದ ಮೊದಲ ಮುಖ್ಯಮಂತ್ರಿಯಾಗಿರುವ ಬಿ.ಎಸ್.ಯಡಿಯೂರಪ್ಪ ಇದೀಗ ತಮ್ಮ ಪುತ್ರರಾದ ರಾಘವೇಂದ್ರ, ವಿಜಯೇಂದ್ರ, ಪುತ್ರ ಉಮಾದೇವಿ, ಅಳಿಯ ಸೇರಿದಂತೆ ಕುಟುಂಬದ ಸದಸ್ಯರಿಗೆಲ್ಲ ಕಾನೂನು ಬಾಹಿರವಾಗಿ ಜಮೀನು ಡಿನೋಟಿಫಿಕೇಷನ್ ಮಾಡಿಕೊಟ್ಟಿರುವ ಗಂಭೀರ ಆರೋಪ ಎದುರಿಸುತ್ತಿದ್ದಾರೆ.
ರಾಜ್ಯದಲ್ಲಿ ಈ ಮೊದಲು ಆಡಳಿತ ನಡೆಸಿದ ಕಾಂಗ್ರೆಸ್, ಜೆಡಿಎಸ್ ಕೂಡ ಡಿನೋಟಿಫಿಕೇಷನ್, ಭೂ ಹಗರಣದಲ್ಲಿ ತೊಡಗಿತ್ತು. ಇದೀಗ ನಾವು ಕೂಡ ಅದನ್ನೇ ಮುಂದುವರಿಸುತ್ತಿದ್ದೇವೆ ಎಂದು ಕಳೆದ ಹತ್ತು ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಯಡಿಯೂರಪ್ಪ ಸಾರ್ವಜನಿಕವಾಗಿ ಹೇಳಿಕೆ ನೀಡಿ ತಮ್ಮ ಹಗರಣಕ್ಕೆ ಸಮರ್ಥನೆ ನೀಡಿದ್ದರು.
ಭೂ ಹಗರಣಕ್ಕೆ ಸಂಬಂಧಿಸಿದಂತೆ ಎಲ್ಲಡೆಯಿಂದ ಒತ್ತಡ, ಟೀಕೆಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಎಚ್ಚೆತ್ತುಕೊಂಡು, ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಹಗರಣಕ್ಕೆ ಸಂಬಂಧಿಸಿದಂತೆ ಕೂಡಲೇ ಜಮೀನನ್ನು ವಾಪಸ್ ಮಾಡಿ, ತನಿಖೆ ನಡೆಸುವಂತೆ ಸೂಚನೆ ನೀಡಿತ್ತು.
ಇನ್ನು ಎರಡು ವರ್ಷ ನಾನೇ ಮುಖ್ಯಮಂತ್ರಿ, ಗಡ್ಕರಿ ಶಬ್ಬಾಸ್‌ಗಿರಿ-ಸಿಎಂ ನನ್ನ ನಾಯಕತ್ವದ ಬಗ್ಗೆ ಬಿಜೆಪಿ ಹೈಕಮಾಂಡ್ ಆಗಲಿ, ಆರೆಸ್ಸೆಸ್ ಮುಖಂಡರು ಈವರೆಗೂ ಅಸಮಾಧಾನ ವ್ಯಕ್ತಪಡಿಸಿಲ್ಲ. ಅವೆಲ್ಲ ಕಪೋಲಕಲ್ಪಿತ ಸುದ್ದಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ಗಡ್ಕರಿ ಮತ್ತು ಆರ್ಎಸ್ಎಸ್ ಮುಖಂಡರೊಂದಿಗೆ ದೂರವಾಣಿ ಮೂಲಕ ಕಳೆದ ರಾತ್ರಿ ಚರ್ಚೆ ಮಾಡಿದ್ದೇನೆ ಎಂದರು.
ರಾಜ್ಯ ಸರಕಾರ ಒಳ್ಳೆ ಅಭಿವೃದ್ಧಿ ಕೆಲಸ ಮಾಡುತ್ತಿದ್ದು, ಭಾಗ್ಯಲಕ್ಷ್ಮಿ ಯೋಜನೆ ಬಗ್ಗೆ ಗಡ್ಕರಿ ಅವರು ಶಬ್ಬಾಸ್‌ಗಿರಿ ನೀಡಿರುವುದಾಗಿ ತಿಳಿಸಿದರು. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಗಲಿದೆ, ನಾಯಕತ್ವ ಬದಲಾವಣೆಗಾಗಿ ಶಾಸಕರ ಸಹಿ ಸಂಗ್ರಹ ಮಾಡಲಾಗುತ್ತಿದೆ, ನಾಯಕತ್ವದ ಬದಲಾವಣೆಗಾಗಿ ವರಿಷ್ಠರು, ವೀಕ್ಷಕರು ಬೆಂಗಳೂರಿಗೆ ಬರುತ್ತಿದ್ದಾರೆ ಎಂಬ ಸುದ್ದಿ ಆಧಾರ ರಹಿತ ಎಂದು ಹೇಳಿದರು.