ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸಿಎಂ ಭೂ ಹಗರಣ: ರಾಜ್ಯಕ್ಕೆ 5 ಸಾವಿರ ಕೋಟಿ ನಷ್ಟ? (JDS | Kumaraswamy | Yeddyurappa | Congress | Land scam)
Bookmark and Share Feedback Print
 
PTI
ಭೂ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅವರ ಪುತ್ರ ಹಾಗೂ ಸಂಸದ ಬಿ.ವೈ.ರಾಘವೇಂದ್ರ, ಮುಖ್ಯಮಂತ್ರಿಯವರ ಸಚಿವಾಲಯ ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಿಗಳ ವಿರುದ್ಧ ಜೆಡಿಎಸ್ ಗುರುವಾರ ಲೋಕಾಯುಕ್ತರಿಗೆ ದೂರು ನೀಡಿದೆ.

ಜೆಡಿಎಸ್ ವಕ್ತಾರ, ವಿಧಾನಪರಿಷತ್ ಸದಸ್ಯ ವೈ.ಎಸ್.ವಿ.ದತ್ತ ಅವರು ನಿಗದಿತ ನಮೂನೆಯಲ್ಲಿ ದೂರು ನೀಡಿದ್ದಾರೆ. ಅಲ್ಲದೇ ದೂರಿನ ಜೊತೆ 580 ಪುಟಗಳಷ್ಟು ದಾಖಲೆಗಳನ್ನೂ ಸಲ್ಲಿಸಿದ್ದಾರೆ.

ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಮತ್ತು ಮಕ್ಕಳ ವಿರುದ್ಧ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿಯವರ ಕಾನೂನು ಬಾಹಿರ ನಿರ್ಧಾರಗಳಿಂದ ರಾಜ್ಯ ಸರಕಾರದ ಬೊಕ್ಕಸಕ್ಕೆ 5 ಸಾವಿರ ಕೋಟಿ ರೂ.ನಷ್ಟವಾಗಿದೆ ಎಂದು ದೂರಿನಲ್ಲಿ ಹೇಳಿದ್ದಾರೆ.

ಯಡಿಯೂರಪ್ಪ ಅವರು ಅಧಿಕಾರಕ್ಕೆ ಬಂದ ದಿನದಿಂದ ಈವರೆಗೆ 78 ಪ್ರಕರಣಗಳಲ್ಲಿ 138 ಎಕರೆ ಭೂಮಿಯನ್ನು ಕಾನೂನು ಬಾಹಿರವಾಗಿ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ದೂರಿರುವ ದತ್ತ, ಈ ಸಂಬಂಧ ಪಟ್ಟಿಯೊಂದನ್ನು ದೂರಿನ ಜೊತೆ ಲಗತ್ತಿಸಿದ್ದಾರೆ. ಈ ಪ್ರಕರಣಗಳಲ್ಲಿ ಮುಖ್ಯಮಂತ್ರಿಯವರು ಹೈಕೋರ್ಟ್, ಸುಪ್ರೀಂಕೋರ್ಟ್ ತೀರ್ಪಿಗೆ ವಿರುದ್ಧವಾಗಿ, ಬಿಡಿಎ ಕಾನೂನು ಮೀರಿ, ಅಧಿಕಾರಿಗಳ ವರದಿಗಳಿಗೆ ವಿರುದ್ಧವಾಗಿ ಕ್ರಮಕೈಗೊಂಡಿದ್ದಾರೆ ಎಂದು ದೂರಿದ್ದಾರೆ.

ಇವನ್ನೂ ಓದಿ...
ಯಡಿಯೂರಪ್ಪ ಪರ ಆರೆಸ್ಸೆಸ್ ಬ್ಯಾಟಿಂಗ್
ಶೋಭಾ ಕರಂದ್ಲಾಜೆ ಮೇಲೂ ಆರೋ
ಸೀರೆ ಖರೀದಿಯಲ್ಲೂ ಅವ್ಯವಹಾರ-ಎಚ್‌ಡಿಕ
ಅನಂತ್ ಕುಮಾರ್ ಕಾರಣವೇ?
ಸಂಬಂಧಿತ ಮಾಹಿತಿ ಹುಡುಕಿ