ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಡಿನೋಟಿಫೈ ಬಗ್ಗೆ ಸರಕಾರ ಶ್ವೇತಪತ್ರ ಹೊರಡಿಸಲಿ: ಪುಟ್ಟಣ್ಣಯ್ಯ (Puttannayya | D notify | BDA | KIADB | BJP | JDS)
Bookmark and Share Feedback Print
 
ರಾಜ್ಯದಲ್ಲಿ ಹತ್ತು ವರ್ಷದಿಂದ ನಡೆದಿರುವ ಭೂಮಿಯ ಡಿನೋಟಿಫೈ ವ್ಯವಹಾರದ ಬಗ್ಗೆ ಸರಕಾರ ಶ್ವೇತಪತ್ರ ಹೊರಡಿಸಬೇಕು ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೆ.ಎಸ್. ಪುಟ್ಟಣ್ಣಯ್ಯ ಒತ್ತಾಯಿಸಿದ್ದಾರೆ.

ಕ್ಷಣ ಕ್ಷಣದ ತಾಜಾ ಸುದ್ದಿಗಳಿಗೆ, ವಿಶೇಷ ಸುದ್ದಿಗಳಿಗೆ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ 10 ವರ್ಷದಿಂದ ಮುಖ್ಯಮಂತ್ರಿ ಆಗಿದ್ದವರೆಲ್ಲ ಡಿನೋಟಿಫೈನಿಂದ ಸಹಸ್ರಾರು ಕೋಟಿ ರೂ. ಅವ್ಯವಹಾರ ನಡೆಸಿದ್ದಾರೆ. ಈ ಬಗ್ಗೆ ಶ್ವೇತಪತ್ರದ ಮೂಲಕ ಜನತೆಗೆ ಮಾಹಿತಿ ನೀಡುವುದು ಅಗತ್ಯ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಯಡಿಯೂರಪ್ಪ ಅವರು ಒಂದು ಲಕ್ಷ ಎಕರೆಯ ಅದಿರು ಲೂಟಿಗೆ ಅವಕಾಶ ಕಲ್ಪಿಸಿದ್ದಲ್ಲದೆ, ಗಣಿ ಹಗರಣಕ್ಕಿಂತಲೂ ಮಿಗಿಲಾಗಿರುವ ಡಿನೋಟಿಫೈನ ಅವ್ಯವಹಾರದಲ್ಲಿ ಭಾಗಿಯಾಗಿದ್ದಾರೆ. ಕುಟುಂಬ ಸದಸ್ಯರು ಮತ್ತು ಸಂಬಂಧಿಕರಿಗೆ ಮನಸೋ ಇಚ್ಛೆ ಭೂ ದಾನ ಮಾಡಿದ್ದಾರೆ ಎಂದು ಆರೋಪಿಸಿದರು. ಯಡಿಯೂರಪ್ಪ ಅವರು ಇನ್ನು ಮುಂದೆ ಡಿನೋಟಿಫೈ ಮಾಡುವುದಿಲ್ಲ ಎಂದು ಹೇಳಿ ಸುಮ್ಮನಾದರೆ ಸಾಲದು. ಈವರೆಗೆ ನಡೆದಿರುವ ಡಿನೋಟಿಫೈ ಮತ್ತು ಹಗರಣಗಳ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಅವರು ಆಗ್ರಹಿಸಿದರು.

ರಾಜನೀತಿ ದುರ್ಬಲವಾದರೆ ಕಾರ್ಯಾಂಗವೂ ದುರ್ಬಲವಾಗುತ್ತದೆ. ಪರಿಣಾಮವಾಗಿ ಪ್ರಜಾಪ್ರಭುತ್ವ ವ್ಯವಸ್ಥೆ ಬುಡಮೇಲಾಗುತ್ತದೆ. ಹಾಗಾಗಿ ಯಡಿಯೂರಪ್ಪ ಅವರು ಜವಾಬ್ದಾರಿಯಿಂದ ವರ್ತಿಸಿ, ಉತ್ತಮ ಆಡಳಿತ ನೀಡುವ ನಿಟ್ಟಿನಲ್ಲಿ ಮುಂದಾಗಬೇಕು ಎಂದು ಅವರು ತಿಳಿಸಿದರು. ಡಿನೋಟಿಫೈ ಹೆಸರಿನಲ್ಲಿ ಗೋಲ್‌ಮಾಲ್ ತಪ್ಪಿಸುವ ನಿಟ್ಟಿನಲ್ಲಿ ಹೊಸ ಕಾಯ್ದೆ ಜಾರಿಗೊಳಿಸುವುದು ಅಗತ್ಯ. ಇಲ್ಲವಾದಲ್ಲಿ ಜನರ ತೆರಿಗೆ ಹಣದ ಲೂಟಿ ತಡೆ ಅಸಾಧ್ಯ ಎಂದು ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ