ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ದೆಹಲಿಯಿಂದ ಬುಲಾವ್; ಸಿಎಂ ನಿವಾಸದಲ್ಲಿ ಬಿಸಿ ಬಿಸಿ ಚರ್ಚೆ (BJP | Karnataka | BS Yeddyurappa | LK Advani)
Bookmark and Share Feedback Print
 
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಬಿಜೆಪಿ ಪಕ್ಷದ ಹೈಕಮಾಂಡ್ ಮತ್ತೆ ದೆಹಲಿಗೆ ಬುಲಾವ್ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ನಿವಾಸದಲ್ಲಿ ಬೆಂಬಲಿಗ ಸಚಿವರೊಂದಿಗೆ ಭಾನುವಾರ ಬೆಳಗ್ಗೆ ಬಿಸಿ ಬಿಸಿ ಚರ್ಚೆ ಆರಂಭವಾಗಿದೆ.

ಸಿಎಂ ಪುತ್ರರ ಭೂಹಗರಣ ಪ್ರಕರಣದ ಹಿನ್ನೆಲೆಯಲ್ಲಿ ಹೈಕಮಾಂಡ್, ಯಡ್ಡಿ ಅವರನ್ನು ದೆಹಲಿಗೆ ಕರೆಯಿಸಿಕೊಂಡಿದ್ದಾರೆ. ದೆಹಲಿಯಲ್ಲಿಂದು ಮತ್ತೊಂದು ಸುತ್ತಿನ ಕೋರ್ ಕಮಿಟಿ ಸಭೆ ನಡೆಯಲಿದೆ.

ಕ್ಷಣ ಕ್ಷಣದ ತಾಜಾ ಸುದ್ದಿಗಳಿಗೆ, ವಿಶೇಷ ಸುದ್ದಿಗಳಿಗೆ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಇಂದು ಸಂಜೆ ಬಿಜೆಪಿ ವರಿಷ್ಠರ ಭೇಟಿ ಹಿನ್ನೆಲೆಯಲ್ಲಿ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಸಿಎಂ ನಿವಾಸದಲ್ಲಿ ಬೆಂಬಲಿಗ ಸಚಿವರೊಂದಿಗೆ ಗಂಭೀರ ಚರ್ಚೆ ಆರಂಭವಾಗಿದೆ. ಸಚಿವರಾದ ಅಶೋಕ್, ಬೊಮ್ಮಾಯಿ, ವಿ. ಸೋಮಣ್ಣ, ಸುರೇಶ್ ಕುಮಾರ್, ಕಟ್ಟಾ ಸುಬ್ರಮಣ್ಯ ನಾಯ್ಡು ಜತೆ ಮುಖ್ಯಮಂತ್ರಿ ಸಮಾಲೋಚನೆ ನಡೆಸುತ್ತಿದ್ದಾರೆ.

ಹೈಕಮಾಂಡ್ ಮುಂದೆ ಸಮರ್ಥನೆ ಮಾಡಿಕೊಳ್ಳುವ ಹಿನ್ನೆಲೆಯಲ್ಲಿ ಭೂಹಗರಣಗಳ ಬಗ್ಗೆ ಗಂಭೀರ ಚರ್ಚೆ ನಡೆಸಲಾಗುತ್ತಿದೆ.

ಸಿಎಂ ಬೆಂಬಲಿಗರು ದೆಹಲಿಗೆ ತೆರಳುವ ಸಾಧ್ಯತೆ...
ಅದೇ ಹೊತ್ತಿಗೆ ಸಿಎಂ ಜತೆ 10ರಿಂದ 15 ಮಂದಿ ಶಾಸಕರು ದೆಹಲಿಗೆ ತೆರಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಆ ಮೂಲಕ ದೆಹಲಿಯಲ್ಲೂ ಸಿಎಂ ಬಲ ಪ್ರದರ್ಶನಕ್ಕಿಳಿಯಲಿದ್ದಾರೆ.

ವಿರೋಧ ಪಕ್ಷಗಳ ಆರೋಪಗಳಿಗೆ ಮುಖ್ಯಮಂತ್ರಿ ದಾಖಲೆ ಸಹಿತ ಉತ್ತರ ನೀಡಬೇಕಾಗುತ್ತದೆ. ಹಾಗೆಯೇ ತಮ್ಮ ನಿಯೋಗವನ್ನು ದೆಹಲಿಗೆ ಕರೆದುಕೊಂಡು ಹೋಗುವ ಮೂಲಕ ಹೈಕಮಾಂಡ್ ಮೇಲೆ ಮುಖ್ಯಮಂತ್ರಿ ಒತ್ತಡ ಮಾಡಲಾಗುವ ಸಾಧ್ಯತೆಯಿದೆ.

ಒಟ್ಟಾರೆಯಾಗಿ ದೆಹಲಿಯ ಅಡ್ವಾಣಿ ನಿವಾಸದಲ್ಲಿ ನಡೆಯಲಿರುವ ಮತ್ತೊಂದು ಸುತ್ತಿನ ಮಾತುಕತೆಯಲ್ಲಿ ಯಡ್ಡಿ ಭವಿಷ್ಯ ನಿರ್ಧಾರವಾಗಲಿದೆ.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ ನಮ್ಮನ್ನು ಫಾಲೋ ಮಾಡಿ
ಸಂಬಂಧಿತ ಮಾಹಿತಿ ಹುಡುಕಿ