ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಲೋಕಾಯುಕ್ತರಿಗೆ ಪರಮಾಧಿಕಾರ ಕೊಡಬೇಕು: ನ್ಯಾ.ಸದಾಶಿವ (Lokayuktha | Sadashiva | Yeddyurappa | SC | UPA)
Bookmark and Share Feedback Print
 
ಲೋಕಾಯುಕ್ತರಿಗೆ ಪರಮಾಧಿಕಾರ ನೀಡದಿರುವುದು ನಿರಾಸೆ ತಂದಿದೆ ಎಂದು ಸದಾಶಿವ ಆಯೋಗದ ಅಧ್ಯಕ್ಷ ನ್ಯಾ.ಎ.ಜೆ.ಸದಾಶಿವ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಲೋಕಾಯುಕ್ತರಿಗೆ ಪರಮಾಧಿಕಾರ ನೀಡುವ ಕುರಿತಾದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಭ್ರಷ್ಟಾಚಾರ ನಿರ್ಮೂಲನೆಗೆ ಆಡಳಿತ ವ್ಯವಸ್ಥೆ ಮೊದಲು ಸರಿಯಾಗಬೇಕು ಎಂದರು.

ಭ್ರಷ್ಟ ವ್ಯವಸ್ಥೆಗೆ ಕಾರಣವೂ ನಾವೇ. ಹೀಗಾಗಿ ಅದನ್ನು ಸರಿಪಡಿಸಬೇಕಾದ ಜವಾಬ್ದಾರಿಯೂ ನಮ್ಮದೇ ಎಂದು ಹೇಳಿದರು. ಯಾವುದೇ ಪ್ರಕರಣದಲ್ಲಿ ಲೋಕಾಯುಕ್ತ ನ್ಯಾಯಮೂರ್ತಿಗಳು ಕ್ರಮಕ್ಕೆ ಶಿಫಾರಸು ಮಾಡಬಹುದೇ ಹೊರತು, ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ನ್ಯಾಯಮೂರ್ತಿಗಳಿಗೆ ಕೆಲ ಇತಿಮಿತಿ ಇರುತ್ತವೆ. ಅದನ್ನು ಮೀರಿದರೆ ಕಾನೂನು ಉಲ್ಲಂಘಿಸಿದಂತಾಗುತ್ತದೆ ಎಂದು ಹೇಳಿದರು.

ಬೆಂಗಳೂರು ಬಿಬಿಎಂಪಿ ವ್ಯಾಪ್ತಿ ಸೇರಿದಂತೆ ಎಲ್ಲೆಡೆ ಪರಿಶಿಷ್ಟ ಜಾತಿ, ವರ್ಗದ ಜನಗಣತಿ ಸಮೀಕ್ಷೆ ನಡೆಯುತ್ತಿದ್ದು, ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆ ಇದೆ. ನಂತರ ಕಂಪ್ಯೂಟರ್ ಡಾಟಾ ಪ್ರಕ್ರಿಯೆ ಆರಂಭವಾಗಲಿದೆ ಎಂದು ತಿಳಿಸಿದರು.

ಆಯೋಗದ ಅವಧಿ ನವೆಂಬರ್ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ. ಅವ ವಿಸ್ತರಣೆ ಅಥವಾ ಬೇರೆಯವರ ನೇಮಕ ಸರಕಾರಕ್ಕೆ ಬಿಟ್ಟ ವಿಚಾರ ಎಂದು ಹೇಳಿದರು. ಕೆನೆಪದರ ವಿಚಾರವಾಗಿ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಅದನ್ನು ಪರಿಶೀಲಿಸದ ಹೊರತು ಪ್ರತಿಕ್ರಿಯಿಸುವುದು ಸೂಕ್ತವಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಸಂಬಂಧಿತ ಮಾಹಿತಿ ಹುಡುಕಿ