ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕುರ್ಚಿ ಬಿಡಿ ಅಂತ ಕೇಳಿಲ್ಲ; ಗಡ್ಕರಿ ಭೇಟಿ ತಪ್ಪಿಸಿಕೊಂಡ ಸಿಎಂ (Congress | Gadkari | Karnataka political crisis | B. S. Yeddyurappa | land scams)
Bookmark and Share Feedback Print
 
ರಾಜ್ಯ ರಾಜಕಾರಣದ ಭೂ ಹಗರಣ ಕುರಿತು ಬಿರುಸಿನ ರಾಜಕೀಯ ವಿದ್ಯಮಾನಗಳು ನಡೆಯುತ್ತಿರುವ ನಡುವೆಯೇ, ತನಗೆ ರಾಜೀನಾಮೆ ಕೊಡುವಂತೆ ಯಾವ ಮುಖಂಡರು ಕೇಳಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಏತನ್ಮಧ್ಯೆ ಯಡಿಯೂರಪ್ಪ ಅವರು ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ಗಡ್ಕರಿ ಭೇಟಿಯನ್ನು ತಪ್ಪಿಸಿಕೊಂಡಿದ್ದಾರೆ.

ಕ್ಷಣ ಕ್ಷಣದ ತಾಜಾ ಸುದ್ದಿಗಳಿಗೆ, ವಿಶೇಷ ಸುದ್ದಿಗಳಿಗೆ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಸೋಮವಾರ ಬೆಳಿಗ್ಗೆ 11 ಗಂಟೆಯೊಳಗೆ ಮುಖ್ಯಮಂತ್ರಿಗಾದಿಗೆ ರಾಜೀನಾಮೆ ನೀಡಬೇಕೆಂದು ಹೈಕಮಾಂಡ್ ಗಡುವು ವಿಧಿಸಿತ್ತು ಎಂಬ ವದಂತಿ ದಟ್ಟವಾಗಿ ಹಬ್ಬಿತ್ತು. ಆದರೆ ಯಡಿಯೂರಪ್ಪ ಅದ್ಯಾವುದನ್ನೂ ಗಣನೆಗೆ ತೆಗೆದುಕೊಳ್ಳದೆ ಪುಟ್ಟಪರ್ತಿಗೆ ತೆರಳಿದ ಅವರು ಸಾಯಿಬಾಬಾ ಅವರ ಹುಟ್ಟುಹಬ್ಬ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ನಂತರ ಪುಟ್ಟಪರ್ತಿಯಿಂದ ಪ್ರಧಾನಿ ಮನಮೋಹನ್ ಸಿಂಗ್ ಅವರ ವಿಶೇಷ ವಿಮಾನದಲ್ಲಿ ದೆಹಲಿಯಲ್ಲಿ ವರಿಷ್ಠರನ್ನು ಭೇಟಿಯಾಗಲು ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರು ಅವರನ್ನು ಪಕ್ಷದ ಮುಖಂಡರು ರಾಜೀನಾಮೆ ನೀಡುವಂತೆ ಕೇಳಿದ್ದಾರಲ್ಲ ಎಂಬ ಪ್ರಶ್ನೆಗೆ, ಯಾವ ಮುಖಂಡರು ಕೂಡ ನನಗೆ ರಾಜೀನಾಮೆ ಕೊಡುವಂತೆ ಕೇಳಿಲ್ಲ ಎಂದು ಪ್ರತಿಕ್ರಿಯಿಸಿದರು.

ಪಕ್ಷದ ರಾಷ್ಟ್ರಾಧ್ಯಕ್ಷ ನಿತಿನ್ ಗಡ್ಕರಿ ಅವರ ಭೇಟಿಯನ್ನು ಯಡಿಯೂರಪ್ಪ ಅವರು ಉದ್ದೇಶಪೂರ್ವಕವಾಗಿ ತಪ್ಪಿಸಿಕೊಂಡಿದ್ದು, ಗಡ್ಕರಿ ಅವರು ನಾಗ್ಪುರಕ್ಕೆ ತೆರಳಿದ್ದಾರೆ. ಇದೀಗ ಮುಂದಿನ ಬೆಳವಣಿಗೆ ಕುರಿತು ನಿರ್ಧಾರ ಕೈಗೊಳ್ಳುವ ಹೊಣೆಗಾರಿಕೆಯನ್ನು ಅರುಣ್ ಜೇಟ್ಲಿ ಅವರಿಗೆ ನೀಡಲಾಗಿದ್ದು, ಈ ನಿಟ್ಟಿನಲ್ಲಿ ಯಡಿಯೂರಪ್ಪ ಅವರು ಜೇಟ್ಲಿ ಅವರನ್ನು ಭೇಟಿಯಾಗಿ ಪ್ರಸಕ್ತ ವಿದ್ಯಮಾನಗಳ ಕುರಿತು ಚರ್ಚೆ ನಡೆಸಲಿದ್ದಾರೆ.

ನವದೆಹಲಿಯಲ್ಲಿ ಸೋಮವಾರ ರಾಜ್ಯರಾಜಕಾರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಬಿರುಸಿನ ಚಟುವಟಿಕೆ ನಡೆಯಿತು. ಮುಖ್ಯಮಂತ್ರಿ ಯಡಿಯೂರಪ್ಪ ಪರವಾಗಿ ಉನ್ನತ ಶಿಕ್ಷಣ ಸಚಿವ ವಿ.ಎಸ್.ಆಚಾರ್ಯ, ಪಕ್ಷದ ವಕ್ತಾರ ಧನಂಜಯ್ ಕುಮಾರ್ ಸೇರಿದಂತೆ ಹಲವು ಮುಖಂಡರು ನಿತಿನ್ ಗಡ್ಕರಿ ಅವರ ಜೊತೆ ಚರ್ಚಿಸಿದ್ದರು. ಆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ. ಈ ಬಗ್ಗೆ ಗಡ್ಕರಿ ಅವರೇ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದರು.

ಆದರೆ ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಯಡಿಯೂರಪ್ಪ ಅವರು ಗಡ್ಕರಿ ಅವರ ಭೇಟಿಯನ್ನು ತಪ್ಪಿಸಿಕೊಂಡಿದ್ದು, ಅರುಣ್ ಜೇಟ್ಲಿ ಜತೆ ಮಾತುಕತೆ ನಡೆಸಿದ ನಂತರ ಹೈಕಮಾಂಡ್ ಯಾವ ನಿರ್ಧಾರವನ್ನು ಪ್ರಕಟಿಸಲಿದೆ ಎಂಬುದು ಕುತೂಹಲ ಮೂಡಿಸಿದೆ.

ಸಂಸದರ ಜತೆ ಸಿಎಂ ಸಭೆ:
ನವದೆಹಲಿ ಕರ್ನಾಟಕ ಭವನದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯದ ಸಂಸದರ ಜತೆ ಮುಂದಿನ ನಡೆ ಹಾಗೂ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದರು.
ಸಂಬಂಧಿತ ಮಾಹಿತಿ ಹುಡುಕಿ