ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ತಪ್ಪು ಸಾಬೀತಾಗದೆ ಶಿಕ್ಷಿಸುವುದು ಸರಿಯಲ್ಲ: ಪೇಜಾವರ ಶ್ರೀ (Karnataka | Yadyurappa | BJP | State Politics)
Bookmark and Share Feedback Print
 
ರಾಜ್ಯ ಸರಕಾರದ ರಾಜಕೀಯ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೇಜಾವರ ವಿಶ್ವೇಶತೀರ್ಥ ಸ್ವಾಮೀಜಿ, ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮೇಲೆ ಹೊರಿಸಲಾಗಿರುವ ಆರೋಪ ಸಾಬೀತಾಗದ ಹೊರತು ಶಿಕ್ಷಿಸುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.

ಕ್ಷಣ ಕ್ಷಣದ ತಾಜಾ ಸುದ್ದಿಗಳಿಗೆ, ವಿಶೇಷ ಸುದ್ದಿಗಳಿಗೆ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಪುತ್ರರ ಭೂಹಗರಣದಿಂದಾಗಿ ಮುಖ್ಯಮಂತ್ರಿ ಸ್ಥಾನ ಇದೀಗ ಅನಿಶ್ಚಿತತೆಯಲ್ಲಿದೆ. ಆದರೆ ತಮ್ಮ ವಿರುದ್ಧದ ಆರೋಪಗಳಿಗೆ ಸಮರ್ಥನೆ ಮಾಡುವ ಅವಕಾಶವನ್ನು ಯಡಿಯೂರಪ್ಪ ಅವರಿಗೆ ನೀಡಬೇಕು ಎಂದು ಪೇಜಾವರ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.

ಅದೇ ಹೊತ್ತಿಗೆ ದೆಹಲಿಗೆ ತೆರಳಿ ಬಿಜೆಪಿ ನಾಯಕ ಅಡ್ವಾಣಿ ಅವರನ್ನು ಭೇಟಿ ಮಾಡಿ ಯಡ್ಡಿ ಪದಚ್ಯುತಿಗೆ ವಿರೋಧ ವ್ಯಕ್ತಪಡಿಸಿದ್ದಾರೆಂಬ ವರದಿಗಳನ್ನು ಸ್ವಾಮೀಜಿ ನಿರಾಕರಿಸಿದ್ದರು. ನಾನು ದೆಹಲಿಗೆ ಹೋಗಿದ್ದು ನಿಜ. ಆದರೆ ಅಡ್ವಾಣಿ ಅವರನ್ನು ಭೇಟಿ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಯಾರ ಜೊತೆಯೂ ಚರ್ಚಿಸಿಲ್ಲ. ಆದರೆ ಯಡ್ಡಿ ವಿಷಯದಲ್ಲಿ ಬಿಜೆಪಿ ಹೈಕಮಾಂಡ್ ಪ್ರಜಾಪ್ರಭುತ್ವ ತತ್ವಗಳ ವ್ಯಾಪ್ತಿಯಲ್ಲೇ ಪರಿಹಾರ ದೊರಕಿಸಬೇಕು ಎಂದವರು ಹೇಳಿದರು.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ ನಮ್ಮನ್ನು ಫಾಲೋ ಮಾಡಿ
ಸಂಬಂಧಿತ ಮಾಹಿತಿ ಹುಡುಕಿ