ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಭೂ ಹಗರಣಗಳ ತನಿಖೆಗೆ ನ್ಯಾ.ಬಿ.ಪದ್ಮರಾಜ್ ನೇಮಕ (Land Scam | BJP | Congress | JDS | Padamaraj | High court)
Bookmark and Share Feedback Print
 
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಲೆದಂಡ ವಿಚಾರದ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ರಾಜ್ಯದಲ್ಲಿ ಕಳೆದ 15 ವರ್ಷಗಳಿಂದೀಚೆಗೆ ನಡೆದಿರುವ ಭೂ ಹಗರಣಗಳ ತನಿಖೆ ನಡೆಸಲು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ.ಪದ್ಮರಾಜ್ ನೇತೃತ್ವದ ಆಯೋಗವನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ದ ಕಾನೂನು ಬಾಹಿರವಾಗಿ ಭೂಮಿ ನೀಡಿರುವುದು, ಬಿಡಿಎ, ಕೆಐಎಡಿಬಿ, ಡಿನೋಟಿಫಿಕೇಷನ್ ಮತ್ತಿತರ ಆರೋಪಗಳು ಕೇಳಿಬಂದಿದ್ದವು. ಆ ಹಿನ್ನೆಲೆಯಲ್ಲಿ ಕಳೆದ ಹತ್ತು ವರ್ಷಗಳ ಭೂಹಗರಣಗಳ ಕುರಿತು ನ್ಯಾಯಾಂಗ ತನಿಖೆ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು. ಆದರೆ ಮುಖ್ಯಮಂತ್ರಿ ಯಡಿಯೂರಪ್ಪ, ದೇವೇಗೌಡರ ಕಾಲದಿಂದ ಸೇರಿಸಿ 2010 ನವೆಂಬರ್ 22ರವರೆಗೆ ನಡೆದಿರುವ ಹಗರಣಗಳ ತನಿಖೆಗೆ ಆದೇಶ ಹೊರಡಿಸಿದ್ದಾರೆ.

ದೇವೇಗೌಡರು 1994ರಿಂದ 1996ರ ಅವಧಿಯಲ್ಲಿ ಮುಖ್ಯಮಂತ್ರಿ ಹುದ್ದೆಯಲ್ಲಿದ್ದರು. ಈ ಹಿನ್ನೆಲೆಯಲ್ಲಿ 1995ರಿಂದ ಈಚೆಗಿನ ಎಲ್ಲ ಪ್ರಕರಣಗಳ ತನಿಖೆಗೆ ಆದೇಶ ನೀಡಲಾಗಿದೆ. ಭೂ ಹಗರಣಗಳ ತನಿಖೆಗೆ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿಯನ್ನು ನೇಮಕ ಮಾಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದರು. ಆದರೆ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳು ಯಾರೂ ಒಪ್ಪದ ಕಾರಣ ಇದೀಗ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯನ್ನೇ ನೇಮಿಸಲಾಗಿದೆ.

ಭೂ ಹಗರಣಗಳ ತನಿಖೆಗೆ ನ್ಯಾ. ಬಿ.ಪದ್ಮರಾಜ್ ನೇತೃತ್ವದ ಏಕಸದಸ್ಯ ಆಯೋಗ ರಚಿಸಿದ್ದು, ಹಗರಣಗಳ ವರದಿ ನೀಡಲು ಒಂದು ವರ್ಷಗಳ ಗಡುವು ನೀಡಲಾಗಿದೆ. ಸೋಮವಾರದಿಂದ ಅನ್ವಯವಾಗುವಂತೆ ಆದೇಶ ಜಾರಿಗೊಂಡಿದ್ದು, ಕಳೆದ 16 ವರ್ಷಗಳ ಭೂಹಗರಣಗಳ ತನಿಖೆ ಆರಂಭಗೊಳ್ಳಲಿದೆ.

ನ್ಯಾಯಮೂರ್ತಿ ಪದ್ಮರಾಜ್ ಅವರು ಪ್ರಸ್ತುತ ರಾಜ್ಯದ ವೃತ್ತಿಪರ ಶಿಕ್ಷಣ ಕೋರ್ಸ್‌ಗಳ ಶುಲ್ಕ ನಿಯಂತ್ರಣ ಆಯೋಗದ ಅಧ್ಯಕ್ಷರಾಗಿದ್ದಾರೆ. 1983ರಲ್ಲಿ ಜಿಲ್ಲಾ ಸೆಷೆನ್ಸ್ ನ್ಯಾಯಾಧೀಶರಾಗಿ ನೇಮಕಗೊಂಡಿದ್ದ ಅವರು, 1994ರ ನವೆಂಬರ್ 30ರಂದು ಹೈಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ಬಡ್ತಿ ಪಡೆದಿದ್ದರು.
ಸಂಬಂಧಿತ ಮಾಹಿತಿ ಹುಡುಕಿ