ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಅನಂತ್ ಕುಮಾರ್ ಸಿಎಂ ಪರ ನಿಲ್ಲಲಿ: ಅಂಬೇಡ್ಕರ್ ಕ್ರಾಂತಿಸೇನೆ (Ananth kumar | Dalith kriya samithi | BJP | Yeddyurappa)
Bookmark and Share Feedback Print
 
NRB
ಭೂ ಹಗರಣದ ಸುಳಿಯಲ್ಲಿ ಸಿಲುಕಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ತಲೆದಂಡದ ಕುರಿತು ಪಕ್ಷದ ಹೈಕಮಾಂಡ್‌ನಲ್ಲಿ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ರಾಜ್ಯಾದ್ಯಂತ ವಿವಿಧ ಮಠಾಧೀಶರು ಯಡಿಯೂರಪ್ಪ ಪರ ಬೆಂಬಲ ವ್ಯಕ್ತಪಡಿಸಿದ್ದಾರೆ. ಹಲವೆಡೆ ಬಿಜೆಪಿ ಕಾರ್ಯಕರ್ತರು ಆತ್ಮಾಹುತಿಗೆ ಯತ್ನಿಸಿದ ಘಟನೆಯೂ ನಡೆದಿದೆ. ಈ ಸಂದರ್ಭದಲ್ಲಿ ರಾಜ್ಯದ ಸಂಸದ ಅನಂತ್ ಕುಮಾರ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಪರ ನಿಲ್ಲಬೇಕು ಎಂದು ಆಗ್ರಹಿಸಿ ಅವರ ನಿವಾಸದ ಮುಂದೆ ಮಂಗಳವಾರ ಸಂಜೆ ಅಂಬೇಡ್ಕರ್ ಕ್ರಾಂತಿ ಸೇನೆ ಧರಣಿ ನಡೆಸಿದೆ.

ಕ್ಷಣ ಕ್ಷಣದ ತಾಜಾ ಸುದ್ದಿಗಳಿಗೆ, ವಿಶೇಷ ಸುದ್ದಿಗಳಿಗೆ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಬಿ.ಎಸ್.ಯಡಿಯೂರಪ್ಪ ಅವರನ್ನು ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಬಾರದು. ಈ ನಿಟ್ಟಿನಲ್ಲಿ ರಾಜ್ಯದ ಸಂಸದ ಅನಂತ್ ಕುಮಾರ್ ಅವರು ಮುಖ್ಯಮಂತ್ರಿ ಪರವಾಗಿ ಪಕ್ಷದ ಹೈಕಮಾಂಡ್‌ನಲ್ಲಿ ಚರ್ಚಿಸಬೇಕು ಎಂದು ಆಗ್ರಹಿಸಿ ನಗರದ ಬಸವನಗುಡಿಯಲ್ಲಿರುವ ಅವರ ನಿವಾಸದ ಮುಂದೆ ಅಂಬೇಡ್ಕರ್ ಕ್ರಾಂತಿ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ರಾಜ್ಯದ ಹಲವು ಸಂಸದರು ಯಡಿಯೂರಪ್ಪ ಪರವಾಗಿ ಬೆಂಬಲವಾಗಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಆದರೆ ಸಂಸದ ಅನಂತ್ ಕುಮಾರ್ ಮಾತ್ರ ಯಡಿಯೂರಪ್ಪ ಪರ ಯಾವುದೇ ಹೇಳಿಕೆ ಕೊಟ್ಟಿಲ್ಲ. ಇದು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಸುಮಾರು 20 ಮಂದಿ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳವಾರ ದೆಹಲಿಯಲ್ಲಿ ನಡೆದ ಸಂಸದೀಯ ಮಂಡಳಿ ಸಭೆಯಲ್ಲಿ ರಾಜ್ಯದ ಬಿಜೆಪಿಯ ಎಲ್ಲ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಿದ್ದರು. ರಾಜ್ಯದ ಸಂಸದರಾದ ಅನಂತ್ ಕುಮಾರ್, ಪ್ರಹ್ಲಾದ್ ಜೋಶಿ, ಪಕೀರಪ್ಪ ಹಾಗೂ ಜೆ.ಶಾಂತ ಅವರನ್ನು ಹೊರತುಪಡಿಸಿ ಉಳಿದೆಲ್ಲ ಸಂಸದರು ಯಡಿಯೂರಪ್ಪ ಪರವಾಗಿ ಮಾತನಾಡಿದ್ದರು.

ಆದರೆ ಈ ನಾಲ್ಕು ಜನ ಸಂಸದರು ಮಾತ್ರ ಯಡಿಯೂರಪ್ಪ ಪರ ಏನೂ ಮಾತನಾಡದೆ ಮೌನಕ್ಕೆ ಶರಣಾಗಿದ್ದರು ಎಂದು ಮೂಲವೊಂದು ತಿಳಿಸಿದೆ. ರಾಜ್ಯರಾಜಕಾರಣದಲ್ಲಿ ಅನಂತ್ ಕುಮಾರ್ ಮತ್ತು ಯಡಿಯೂರಪ್ಪ ಬಣದೊಳಗಿನ ಜಂಗೀಕುಸ್ತಿ ಜಗಜ್ಜಾಹೀರಾದ ವಿಚಾರವೇ. ಅದು ಇದೀಗ ಬಹಿರಂಗಗೊಂಡಂತಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ