ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಭೂ ಹಗರಣ-ಎರಡೆರಡು ತನಿಖೆ ಯಾಕೆ?: ಲೋಕಾಯುಕ್ತ ಕಿಡಿ (Land Scam | Santhosh hegde | Lokayuktha | BJP | Yeddyurappa)
Bookmark and Share Feedback Print
 
ಭೂ ಹಗರಣಗಳ ಬಗ್ಗೆ ಈಗಾಗಲೇ ತನಿಖೆ ಕೈಗೆತ್ತಿಕೊಂಡಿದ್ದು, ಆ ನಿಟ್ಟಿನಲ್ಲಿ ರಾಜ್ಯ ಸರಕಾರ ಮತ್ತೆ ನ್ಯಾಯಾಂಗ ತನಿಖೆಗೆ ಆದೇಶಿಸಿರುವ ಕುರಿತು ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕ್ಷಣ ಕ್ಷಣದ ತಾಜಾ ಸುದ್ದಿಗಳಿಗೆ, ವಿಶೇಷ ಸುದ್ದಿಗಳಿಗೆ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಭೂ ಹಗರಣಗಳ ವಿರುದ್ಧ ನ್ಯಾಯಾಂಗ ತನಿಖೆಗೆ ಆದೇಶಿಸಿರುವ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ ತಿಳಿಸಿದ್ದಾರೆ. ಒಂದೇ ಹಗರಣದ ಬಗ್ಗೆ ಎರಡೆರಡು ತನಿಖೆ ಅಗತ್ಯವಿದೆಯೇ ಎಂದು ಪ್ರಶ್ನಿಸಿದರು.

ಈಗಾಗಲೇ ಜೆಡಿಎಸ್ ಭೂ ಹಗರಣಕ್ಕೆ ಸಂಬಂಧಿಸಿದಂತೆ ದಾಖಲೆ ಸಹಿತ ಲೋಕಾಯುಕ್ತಕ್ಕೆ ದೂರು ನೀಡಿತ್ತು. ಆ ಬಗ್ಗೆ ತನಿಖೆ ಕೈಗೆತ್ತಿಕೊಳ್ಳಲಾಗಿದೆ. ಆದರೆ ಇದೀಗ ರಾಜ್ಯ ಸರಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಇದನ್ನು ತನಿಖೆಗೆ ಕೈಗೆತ್ತಿಕೊಳ್ಳಬೇಕೆ ಬೇಡವೇ ಎಂಬ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚನೆ ನಡೆಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.

ಭೂ ಹಗರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸುವ ಮುನ್ನ ನನ್ನ ಗಮನಕ್ಕೆ ರಾಜ್ಯ ಸರಕಾರ ತರಬೇಕಿತ್ತು ಎಂದು ಹೇಳಿರುವ ಹೆಗ್ಡೆ, ಸರಕಾರದ ನಿಲುವು ತಮಗೆ ಅಸಮಾಧಾನ ತಂದಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೂ ಹಗರಣಗಳ ಸುಳಿಗೆ ಸಿಲುಕಿ ಸಾಕಷ್ಟು ವಿವಾದಕ್ಕೆ ಈಡಾಗಿದ್ದರು. ಆರೋಪದಲ್ಲಿ ಮುಖ್ಯಮಂತ್ರಿ ತಲೆದಂಡವಾಗಬೇಕು ಎಂದು ವಿಪಕ್ಷಗಳು ಆಗ್ರಹಿಸಿದ್ದವು. ಈ ಎಲ್ಲಾ ರಾಜಕೀಯ ಜಂಗೀಕುಸ್ತಿ ನಡುವೆ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲು ಬಿಜೆಪಿ ಹೈಕಮಾಂಡ್ ಕೂಡ ಗ್ರೀನ್ ಸಿಗ್ನಲ್ ನೀಡುವ ಮೂಲಕ ಬಚಾವ್ ಆಗಿದ್ದಾರೆ.

ಏತನ್ಮಧ್ಯೆ ದೇವೇಗೌಡರ ಕಾಲದಿಂದ (1994) ಹಿಡಿದು 2010ರವರೆಗೆ ನಡೆದಿರುವ ಎಲ್ಲಾ ಭೂ ಹಗರಣಗಳ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ನಿವೃತ್ತ ನ್ಯಾ.ಬಿ.ಪದ್ಮರಾಜ್ ನೇತೃತ್ವದ ಆಯೋಗ ರಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಲೋಕಾಯುಕ್ತರ ವಿರುದ್ಧ ಬಿಜೆಪಿ ಕಿಡಿ:
ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರ ನಡೆ ಸಂಶಯಕ್ಕೆ ಎಡೆ ಮಾಡಿದ್ದು, ಸರಕಾರ ಕೊಟ್ಟ ಪ್ರಕರಣಗಳನ್ನು ತನಿಖೆ ಮಾಡದೆ ಮಾಧ್ಯಮಗಳ ಮುಂದೆ ಸರಕಾರದ ವಿರುದ್ಧ ಹೇಳಿಕೆ ನೀಡುವುದು ಸರಿಯಲ್ಲ ಎಂದು ಕೆಲ ಬಿಜೆಪಿ ಶಾಸಕರು ಲೋಕಾಯುಕ್ತರ ವಿರುದ್ಧ ಹರಿಹಾಯ್ದಿದ್ದಾರೆ.

ವಿಧಾನಸೌಧದ ಬಿಜೆಪಿ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಶಾಸಕರಾದ ಸುರೇಶ್ ಗೌಡ, ಎಸ್.ಆರ್.ವಿಶ್ವನಾಥ್, ಸತೀಶ್ ರೆಡ್ಡಿ ಮತ್ತು ನಂದೀಶ್ ರೆಡ್ಡಿ ಅವರು ಮಂಗಳವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಹಿಂದಿನ ಸರಕಾರ ಎಸಗಿದ ಅನೇಕ ಅಕ್ರಮಗಳ ಬಗ್ಗೆ ತನಿಖೆ ಮಾಡಲು ಲೋಕಾಯುಕ್ತರಿಗೆ ಅಧಿಕಾರ ನೀಡಿದ್ದು, ಯಾವುದನ್ನೂ ಸರಿಯಾಗಿ ಮಾಡದೆ ಸರಕಾರವನ್ನು ಟೀಕಿಸುತ್ತಿದ್ದಾರೆ. ಜನರಿಂದ ಆಯ್ಕೆಯಾದ ಸರಕಾರವನ್ನು ದುಷ್ಟ ಎಂದು ಆರೋಪಿಸಿದ್ದಾರೆ. ಇದು ಲೋಕಾಯುಕ್ತರ ಗೌರವಕ್ಕೆ ತಕ್ಕುದಲ್ಲ ಎಂದು ಸುರೇಶ್ ಗೌಡ ಆಕ್ಷೇಪಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ