ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಿಜೆಪಿ ಆಯ್ತು; ಡಿ.1ರಿಂದ ಕುಮಾರಸ್ವಾಮಿ ರಥಯಾತ್ರೆ ಶುರು (BJP | Congress | JDS | Yeddyurappa | Kumaraswamy | Rayha yathre)
Bookmark and Share Feedback Print
 
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭ್ರಷ್ಟಾಚಾರ, ಸ್ವಜನಪಕ್ಷಪಾತ ಹಾಗೂ ಭೂ ಹಗರಣಗಳ ಬಗ್ಗೆ ಜನತೆಗೆ ತಿಳಿಸಲು ಡಿಸೆಂಬರ್ 1ರಿಂದ ಬೀದರ್‌ನಿಂದ ಚಾಮರಾಜನಗರದವರೆಗೆ ರಥಯಾತ್ರೆ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.

ಕ್ಷಣ ಕ್ಷಣದ ತಾಜಾ ಸುದ್ದಿಗಳಿಗೆ, ವಿಶೇಷ ಸುದ್ದಿಗಳಿಗೆ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಭೂ ಹಗರಣಗಳ ಕುರಿತಾದ ದಾಖಲೆಗಳನ್ನು ಜನರು ಹಾಗೂ ಮಾಧ್ಯಮಗಳ ಮುಂದೆ ಇಟ್ಟಿದ್ದೇವೆ. ಇಷ್ಟೆಲ್ಲಾ ಮಾಹಿತಿಗಳಿದ್ದರೂ ಬಿಜೆಪಿ ವರಿಷ್ಠರು ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯಾಗಿ ಮುಂದುವರಿಸುವ ತೀರ್ಮಾನ ಕೈಗೊಂಡಿದ್ದಾರೆ. ಅಲ್ಲದೇ ಯಡಿಯೂರಪ್ಪ ಅವರನ್ನು ವರಿಷ್ಠರು ಪದಚ್ಯುತಗೊಳಿಸುತ್ತಾರೆಂಬ ನಿರೀಕ್ಷೆ ತಮಗಿರಲಿಲ್ಲ ಎಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದ್ದಾರೆ.

ವರಿಷ್ಠರು ಕೈಗೊಳ್ಳಬಹುದಾದ ನಿಲುವಿನ ಬಗ್ಗೆ ತಮಗೆ ಮೊದಲೇ ಮಾಹಿತಿ ಇತ್ತು ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು. ವಿರೋಧ ಪಕ್ಷದ ನಾಯಕನಾಗಿ ಯಡಿಯೂರಪ್ಪ ಸರಕಾರದ ಕೆಟ್ಟ ಆಡಳಿತದ ವಿರುದ್ಧ ಹೋರಾಟ ಮಾಡುತ್ತಿದ್ದೇನೆ. ಈ ಸರಕಾರದ ವಿರುದ್ಧ ನಡೆಸಲಿರುವ ಕಾನೂನು ಹೋರಾಟದಲ್ಲಿ ಗೆಲವು ಸಿಗಲಿದೆ ಎಂದು ವಿಶ್ವಾಸವ್ಯಕ್ತಪಡಿಸಿದರು.

ಅಲ್ಲದೆ ಯಡಿಯೂರಪ್ಪ ಅವರನ್ನು ಮುಂದುವರಿಸಲು ಬಿಜೆಪಿ ವರಿಷ್ಠರು ನಿರ್ಧರಿಸಿರುವ ಹಿನ್ನೆಲೆಯಲ್ಲಿ 2ಜಿ ಸ್ಪೆಕ್ಟ್ರಂ ಹಗರಣದ ಬಗ್ಗೆ ಸಂಸತ್‌ನಲ್ಲಿ ಪ್ರಸ್ತಾಪ ಮಾಡಲು ಅವರಿಗೆ ನೈತಿಕತೆ ಇದೆಯೇ ಎಂದು ಪ್ರಶ್ನಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ