ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಭ್ರಷ್ಟಾಚಾರಕ್ಕೆ ಬಿಜೆಪಿ ಹೈಕಮಾಂಡ್ ಕುಮ್ಮಕ್ಕು: ಅಗ್ನಿ ಶ್ರೀಧರ್ (BJP | Yeddyurappa | Agni shridar | Congress,)
Bookmark and Share Feedback Print
 
ಭೂ ಹಗರಣದಲ್ಲಿ ಸಿಲುಕಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ತಲೆದಂಡ ಪಡೆಯದೆ, ಮುಖ್ಯಮಂತ್ರಿಯನ್ನಾಗಿ ಮುಂದುವರಿಸುವ ಮೂಲಕ ಭ್ರಷ್ಟಾಚಾರಕ್ಕೆ ಬಿಜೆಪಿ ಹೈಕಮಾಂಡ್ ಕುಮ್ಮಕ್ಕು ನೀಡಿದೆ ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟ ಆರೋಪಿಸಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪತ್ರಕರ್ತ ಅಗ್ನಿ ಶ್ರೀಧರ್, ದಾಖಲೆಗಳ ಸಮೇತ ಮುಖ್ಯಮಂತ್ರಿಯವರ ಭೂ ಹಗರಣ ಬಯಲಿಗೆಳೆದಿದ್ದರೂ ಸಹ ಹೈಕಮಾಂಡ್ ಭ್ರಷ್ಟ ಮುಖ್ಯಮಂತ್ರಿಯನ್ನು ಅಧಿಕಾರದಿಂದ ಕೆಳಗಿಳಿಯಲು ಸೂಚಿಸದೆ ಮುಂದುವರಿಸಿರುವುದು ಬಿಜೆಪಿಯ ಭ್ರಷ್ಟತೆಯಲ್ಲಿ ಮುಳುಗಿರುವುದು ಸಾಬೀತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಭ್ರಷ್ಟಾಚಾರ ರಕ್ಷಣೆ ಮಾಡಿರುವ ಬಿಜೆಪಿ ನಾಯಕರಿಗೆ ಯಾವುದೇ ನೈತಿಕ ಹಕ್ಕಿಲ್ಲ. ಸಂಸತ್‌ನಲ್ಲಿ 2ಜಿ ಸ್ಪೆಕ್ಟ್ರಂ ಮತ್ತಿತರ ವಿಚಾರ ಪ್ರಸ್ತಾಪಿಸುವ ಹಕ್ಕು ಕಳೆದುಕೊಂಡಿದ್ದಾರೆ ಎಂದರು.

ಮಠಾಧಿಪತಿಗಳು ಸಮಾಜಸೇವೆ ಮಾಡದೆ ಯಡಿಯೂರಪ್ಪ ಪರ ವಕಾಲತ್ತು ವಹಿಸುತ್ತಿರುವುದು ಸರಿಯಲ್ಲ. ಕಾವಿ ತೊಟ್ಟಿರುವ ಸ್ವಾಮೀಜಿಗಳು ಸಮಾಜದ ಒಳಿತಿಗೆ ಕೆಲಸ ಮಾಡಬೇಕೆ ಹೊರತು ರಾಜಕೀಯದಲ್ಲಿ ಮೂಗು ತೂರಿಸುವುದು ಸೂಕ್ತವಲ್ಲ ಎಂದು ಅಭಿಪ್ರಾಯವ್ಯಕ್ತಪಡಿಸಿದರು.

ಸರಕಾರ ಉರುಳಿಸಲು ತಂತ್ರ ಮಾಡಿದ್ದರೆಂಬ ಸಚಿವ ಜನಾರ್ದನ ರೆಡ್ಡಿ ವಿರುದ್ಧ ಮಾಧ್ಯಮಗಳಲ್ಲಿ ಕೇಳಿ ಬಂದ ಆರೋಪದ ಸಿಡಿ ಬಿಡುಗಡೆ ಮಾಡಬೇಕು. ಈ ಬಗ್ಗೆ ಕೂಡಲೇ ತನಿಖೆಯಾಗಬೇಕು. ಇಲ್ಲದಿದ್ದರೆ ಕೋರ್ಟ್ ಮೊರೆ ಹೋಗುವುದಾಗಿ ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ