ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸಿದ್ದು ಸಿಎಂ ಆಗ್ಬೇಕೆಂಬ ಗೌಡ್ರ ಕನಸು ನನಸಾಗಿಲ್ಲ: ರೇವಣ್ಣ (Siddaramaiah | Deve gowda | JDS | Congress | Revanna)
Bookmark and Share Feedback Print
 
ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂಬ ಮಾಜಿ ಪ್ರಧಾನಿ ದೇವೇಗೌಡರ ಕನಸು ನನಸಾಗದೆ ಇರುವುದಕ್ಕೆ ಸ್ವತಃ ಸಿದ್ದು ಅವರೇ ಕಾರಣ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ರೇವಣ್ಣ ತಿಳಿಸಿದ್ದಾರೆ.

ಕ್ಷಣ ಕ್ಷಣದ ತಾಜಾ ಸುದ್ದಿಗಳಿಗೆ, ವಿಶೇಷ ಸುದ್ದಿಗಳಿಗೆ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಪಟ್ಟಣದಲ್ಲಿ ತಾಲೂಕು ಆಡಳಿತ ಆಯೋಜಿಸಿದ್ದ ಕನಕ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇವೇಗೌಡರು ಸಿಎಂ ಆಗಿದ್ದಾಗ ಕುರುಬ ಸಮಾಜವನ್ನು ಹಿಂದುಳಿದ 2 ಎ ವರ್ಗಕ್ಕೆ ಸೇರಿಸಿದರು. ಇದರಿಂದಾಗಿ ವಿಧಾನಸಭೆ, ಜಿಲ್ಲಾ, ತಾಲೂಕು ಮತ್ತು ಗ್ರಾಮ ಪಂಚಾಯಿತಿ ಸ್ಥಾನಗಳಲ್ಲಿ ಮೀಸಲು ಸೌಲಭ್ಯ ದೊರೆತು ನಾನಾ ಹುದ್ದೆಗಳನ್ನು ಅಲಂಕರಿಸಲು ಸಾಧ್ಯವಾಗಿದೆ ಎಂದರು.

ನಮ್ಮೊಳಗಿನ ಎಲ್ಲಾ ದ್ವೇಷವನ್ನು ಮರೆತ ಸಿದ್ದರಾಮಯ್ಯ, ಕಾಂಗ್ರೆಸ್ ಸೇರಿದ್ದಾರೆ. ಆದರೆ, ಕಾಂಗ್ರೆಸ್ ಅವರನ್ನು ಸಿಎಂ ಮಾಡುತ್ತದೆಯೇ ಎಂದು ಈ ಸಂದರ್ಭದಲ್ಲಿ ಪ್ರಶ್ನಿಸಿದರು.
ಸಂಬಂಧಿತ ಮಾಹಿತಿ ಹುಡುಕಿ