ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಜಿಪಂ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸವಿದೆ:ಸಿಎಂ (Chief Minister | B.S. Yeddyurappa | ZP polls | BJP victory)
Bookmark and Share Feedback Print
 
PTI
ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದ್ದು, ವಿರೋಧ ಪಕ್ಷಗಳು ಧೂಳಿಪಟವಾಗಲಿವೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ವಿರೋಧ ಪಕ್ಷಗಳ ನಾಯಕರ ಹಗರಣಗಳನ್ನು ಬಯಲಿಗೆಳೆದು ತಕ್ಕ ಪಾಠ ಕಲಿಸುವುದಾಗಿ ಶಪಥ ಮಾಡಿ, ಶಿಕಾರಿಪುರ ತಮ್ಮ ಜನ್ಮ ಸ್ಥಳವಾಗಿದ್ದರಿಂದ ಹಿಂದಿನ ಯಾವುದೇ ಸರಕಾರಗಳು ಮಾಡದಂತಹ ಭಾಗ್ಯಲಕ್ಷ್ಮಿ, ಪಿಂಚಣಿ ಮತ್ತು ಸಂಧ್ಯಾ ಸುರಕ್ಷಾ ಯೋಜನೆಗಳನ್ನು ಜಾರಿಗೊಳಿಸುವುದಾಗಿ ತಿಳಿಸಿದ್ದಾರೆ.

ಆರೋಗ್ಯ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದ ಹಲವಾರು ಯೋಜನೆಗಳನ್ನು ಜಾರಿಗೊಳಿಸಲು ಬಯಸಿದ್ದೇನೆ. ಆದರೆ, ವಿರೋಧ ಪಕ್ಷಗಳು ಪ್ರತಿಯೊಂದಕ್ಕೆ ಅಡ್ಡಿಯಾಗಿ, ನಮ್ಮ ಕುಟುಂಬದ ವಿರುದ್ಧ ಇಲ್ಲ ಸಲ್ಲದ ಆರೋಪಗಳಲ್ಲಿ ತೊಡಗಿವೆ ಎಂದು ಕಿಡಿಕಾರಿದ್ದಾರೆ.

ಸುಳ್ಳು ಮತ್ತು ಆಧಾರರಹಿತ ಹೇಳಿಕೆಗಳನ್ನು ನೀಡುತ್ತಿರುವ ವಿರೋಧ ಪಕ್ಷಗಳು ಶಾಶ್ವತವಾಗಿ ವಿರೋಧ ಪಕ್ಷಗಳಾಗಿ ಇರಬೇಕಾಗುತ್ತದೆ ಎಂದು ಎಚ್ಚರಿಸಿದರು.

ಗ್ರಾಮೀಣ ಭಾಗದಲ್ಲಿ ತಡೆರಹಿತ ವಿದ್ಯುತ್‌, ಎತ್ತಿನ ಬಂಡಿಗಳನ್ನು ಖರೀದಿಸಲು ಕಡಿಮೆ ಬಡ್ಡಿದರದಲ್ಲಿ ಸಾಲ, ಹಾಲು ಉತ್ಪಾದಕರಿಗೆ ವಿನಾಯಿತಿ ದರಗಳನ್ನು ಸರಕಾರ ಜಾರಿಗೊಳಿಸಿದೆ ಎಂದರು.

ಮುಂದಿನ ಎರಡುವರೆ ವರ್ಷಗಳ ಅವಧಿಯಲ್ಲಿ ತಾವೇ ಪೂರ್ಣಗೊಳಿಸುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಶ್ವಾಸವ್ಯಕ್ತಪಡಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ