ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ನಿಗದಿತ ಅವಧಿಗೆ ಜಿಲ್ಲಾ ಪಂಚಾಯತ್ ಚುನಾವಣೆ:ಸಿಎಂ (zp election | chief minister| B.s.yediyurappa)
Bookmark and Share Feedback Print
 
NRB
ಜಿಲ್ಲಾ ಪಂಚಾಯತ್ ಚುನಾವಣೆಗಳು ನಿಗದಿತ ಅವಧಿಗೆ ನಡೆಯಲಿವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಇತ್ತೀಚೆಗೆ ಹೊರಬಿದ್ದಿರುವ ಹೊಸ ಮೀಸಲಾತಿ ಪಟ್ಟಿ ಅನ್ವಯವೇ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ.ಹಿಂದುಳಿದ ವರ್ಗಗಳಿಗೆ ಆಗಲಿರುವ ಅನ್ಯಾಯವನ್ನು ತಡೆಯಲು ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಂಪುಟ ಸಭೆಯಲ್ಲಿ ನಿಗದಿತ ಅವಧಿಗೆ ಚುನಾವಣೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದ್ದು, ಮೀಸಲಾತಿ ವಿವಾದ ಬಗೆಹರಿದಂತಾಗಿದೆ. ರಾಜ್ಯದ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಲಾಗಿದೆ ಎಂದರು.

ಹಿಂದುಳಿದ ವರ್ಗಗಳಿಗೆ ಎದುರಾಗಲಿರುವ ಅನ್ಯಾಯವನ್ನು ಸರಿಪಡಿಸಲು ಅಪೆಕ್ಸ್ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಲು ಮುಂದಾಗಿರುವುದರಿಂದ, ಹಿಂದುಳಿದ ವರ್ಗಗಳಿಗೆ ನ್ಯಾಯ ದೊರೆಯುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ