ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಭೂ ಕಬಳಿಕೆ ಆರೋಪ ಸಾಬೀತಾದ್ರೆ ಗೌಡರ ಭೂಮಿ ವಶ: ಸಿಎಂ (Deve gowda | JDS | Kumaraswamy | BJP | Yeddyurappa)
Bookmark and Share Feedback Print
 
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬ ಹೊಳೆನರಸೀಪುರ ಮತ್ತು ಅರಕಲಗೂಡು ತಾಲೂಕಿನ ವಿವಿಧ ಗ್ರಾಮದಲ್ಲಿ ಕಾನೂನು ಬಾಹಿರವಾಗಿ ಮಂಜೂರು ಮಾಡಿಸಿಕೊಂಡಿರುವ 82 ಎಕರೆ ಜಮೀನಿನ ಕುರಿತು ವರದಿ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಸನ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.

ದೇವೇಗೌಡರ ಕುಟುಂಬ ಭೂ ಕಬಳಿಸಿರುವ ಬಗ್ಗೆ ಸ್ಥಳಕ್ಕೆ ಖುದ್ದು ಪರಿಶೀಲನೆ ನಡೆಸಿ ಸಮಗ್ರ ವರದಿ ನೀಡುವಂತೆ ಜಿಲ್ಲಾಧಿಕಾರಿಗೆ ತಿಳಿಸಿರುವುದಾಗಿ ಹೇಳಿದರು. ಅಲ್ಲದೇ ದೇವೇಗೌಡ ಮತ್ತು ಅವರ ಕುಟುಂಬ ಪರಿಶಿಷ್ಟರ ಭೂಮಿ ಕಬಳಿಕೆ ಮಾಡಿರುವ ಆರೋಪ ಸಾಬೀತಾದರೆ ಆ ಜಮೀನನ್ನು ಸರಕಾರ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದರು.

ಜೆಡಿಎಸ್ ನಾಯಕರ ವಿರುದ್ಧ ಸೇಡಿನ ರಾಜಕಾರಣ ಮಾಡುವುದಿಲ್ಲ ಎಂದು ಹೇಳಿದ ಮುಖ್ಯಮಂತ್ರಿಗಳು ಪರಿಶಿಷ್ಟ ಜಾತಿಗೆ ಸೇರಿದವರ ಭೂ ಕಬಳಿಕೆ ಮಾಡಿರುವ ಬಗ್ಗೆ ದೂರುಗಳು ಬಂದಿರುವುದರಿಂದ ವರದಿ ನೀಡುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ದಿಢೀರನೆ ದೆಹಲಿ ಆಗಮಿಸಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬುಧವಾರ ರಾಜ್ಯ ಬಿಜೆಪಿ ಸಂಸದರ ಜತೆ ಬೆಳಗಿನ ಉಪಹಾರ ಸೇವಿಸಿದ ನಂತರ ಸಭೆ ನಡೆಸಿ ಪಕ್ಷದ ಹಿರಿಯ ನಾಯಕರನ್ನು ಭೇಟಿಯಾಗಲು ತೆರಳುವ ಮುನ್ನ ಸುದ್ದಿಗಾರರ ಜತೆ ಮಾತನಾಡುತ್ತ ಈ ವಿಷಯ ತಿಳಿಸಿದರು.

ಸೇಡಿನ ರಾಜಕಾರಣ ಮಾಡಬೇಕೆಂಬ ಉದ್ದೇಶ ತಮಗಿಲ್ಲ. ಈ ಹಿಂದೆ ಅಧಿಕಾರ ನಡೆಸಿದವರು ಏನೇನು ಮಾಡಿದ್ದಾರೆ ಎಂಬ ಸತ್ಯವನ್ನು ಜನರ ಮುಂದೆ ಇಡಲಾಗುವುದು ಎಂದರು.
ಸಂಬಂಧಿತ ಮಾಹಿತಿ ಹುಡುಕಿ