ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಭ್ರಷ್ಟ ಅಪ್ಪ-ಮಗನನ್ನ ಕೂಡಲೇ ಬಂಧಿಸಿ: ಸಿದ್ದರಾಮಯ್ಯ (Siddaramaiah | BJP | Lokayuktha | Subramanya | Congress)
Bookmark and Share Feedback Print
 
ಕೆಐಎಡಿಬಿ ಭೂ ಹಗರಣದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಗುಡ್ ಬೈ ಹೇಳಿರುವ ಐಟಿ-ಬಿಟಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರ ಪುತ್ರ ಕಟ್ಟಾ ಜಗದೀಶ್ ಅವರನ್ನು ಕೂಡಲೇ ಬಂಧಿಸಬೇಕೆಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಹಗರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಯಬೇಕಾದರೆ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರ ಪುತ್ರ ಜಗದೀಶ್ ಹಾಗೂ ಇಟಾಸ್ಕಾ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸ್ ಅವರನ್ನು ಕೂಡಲೇ ಬಂಧಿಸಬೇಕು. ಹಗರಣದಲ್ಲಿ ಭಾಗಿಯಾಗಿರುವ ಹಿರಿಯ ಅಧಿಕಾರಿಗಳಾದ ಶಿವಾನಂದ್, ವಿಜಯಶಂಕರ್, ಮುನಿನಾರಾಯಣಪ್ಪ ಸೇರಿದಂತೆ ಇತರೆ ಅಧಿಕಾರಿಗಳನ್ನು ಸೇವೆಯಿಂದ ವಜಾ ಮಾಡಬೇಕೆಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

ಭೂ ಹಗರಣ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೂಡ ರಾಜೀನಾಮೆ ನೀಡಬೇಕು ಎಂಬುದು ನಮ್ಮ ಒತ್ತಾಯ. ಆದರೆ ಅವರು ಭಂಡತನಕ್ಕೆ ಕಟ್ಟು ಬಿದ್ದು ಅಧಿಕಾರದಲ್ಲಿ ಮುಂದುವರಿಯುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಕಟ್ಟಾ ಅವರು ಭೂ ಹಗರಣದಲ್ಲಿ ಶಾಮೀಲಾಗಿರುವುದಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತರು ಎಲ್ಲ ದಾಖಲೆಗಳನ್ನು ಕಲೆ ಹಾಕಿದ್ದಾರೆ. ಬೇನಾಮಿ ಕಂಪನಿ ಮೂಲಕ 87 ಕೋಟಿ ರೂಪಾಯಿ ಲಂಚ ಪಡೆದಿರುವುದಕ್ಕೂ ದಾಖಲೆಗಳಿವೆ ಎಂದು ಲೋಕಾಯುಕ್ತರು ಹೇಳಿದ್ದಾರೆ. ಈ ಲಂಚದ ಹಣದಲ್ಲಿ ಯಡಿಯೂರಪ್ಪನವರಿಗೂ ಪಾಲು ಹೋಗಿರಬಹುದು ಎಂಬ ಅನುಮಾನ ಇದೆ ಎಂದರು.

ಈ ಹಗರಣದ ವಿರುದ್ಧ ಕಾಂಗ್ರೆಸ್ ತನ್ನ ಹೋರಾಟವನ್ನು ತೀವ್ರಗೊಳಿಸಲಿದೆ. ಕಾನೂನು ಮತ್ತು ರಾಜಕೀಯವಾಗಿಯೂ ಹೋರಾಟ ನಡೆಸುತ್ತೇವೆ ಎಂದ ಅವರು, ವಿಧಾನಸಭೆಯಲ್ಲೂ ವಿಷಯ ಪ್ರಸ್ತಾಪಿಸಿ ಸರಕಾರದ ಅಕ್ರಮ ಬಯಲಿಗೆಳೆಯುತ್ತೇವೆ ಎಂದು ಈ ಸಂದರ್ಭದಲ್ಲಿ ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ