ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬೀದರ್: ಜೀಪ್-ಬಸ್ ಮುಖಾಮುಖಿ ಡಿಕ್ಕಿ-14 ಮಂದಿ ಬಲಿ (Bidar | Bus | Thirupathi | Police | KSRTC | Karnataka)
Bookmark and Share Feedback Print
 
ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ವಾಪಸಾಗುತ್ತಿದ್ದ ವೇಳೆ ಜೀಪ್ ಮತ್ತು ಕೆಎಸ್‌ಆರ್‌ಟಿಸಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 14 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಹುಮ್ನಾನಾಬಾದ್‌ನ ಕಪ್ಪರಗಾಂವ್‌ನಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದೆ.

ತಿರುಪತಿಯಲ್ಲಿ ದೇವರ ದರ್ಶನ ಪಡೆದು ಜೀಪ್‌ನಲ್ಲಿ ವಾಪಸಾಗುತ್ತಿದ್ದ ವೇಳೆ ಲಾರಿಯೊಂದನ್ನು ಓವರ್‌ಟೇಕ್ ಮಾಡಲು ಹೋದ ಸಂದರ್ಭದಲ್ಲಿ ಬಸವಕಲ್ಯಾಣದಿಂದ ಹೈದರಾಬಾದ್‌ನತ್ತ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಜೀಪ್-ಬಸ್ ಮುಖಾಮುಖಿ ಡಿಕ್ಕಿಯಲ್ಲಿ ಜೀಪ್‌ನಲ್ಲಿದ್ದವರಲ್ಲಿ 13 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾಲ್ವರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಓರ್ವ ಸಾವನ್ನಪ್ಪಿದ್ದ. ಉಳಿದ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಮೃತರು ಮಹಾರಾಷ್ಟ್ರದ ಲಾತೂರ್‌ನವರು ಎಂದು ಪತ್ತೆ ಹಚ್ಚಲಾಗಿದೆ. ಆದರೆ ಅವರ ವಿವರಗಳು ಲಭ್ಯವಾಗಿಲ್ಲ. ಶವಗಳನ್ನು ಹುಮ್ನಾನಾಬಾದ್ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆ ಕುರಿತು ಕುಟುಂಬದ ಸದಸ್ಯರಿಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ