ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಜಿಲ್ಲಾ ಪಂಚಾಯ್ತಿ-ತಾಲೂಕು.ಪಂ. ಚುನಾವಣೆಗೆ 'ಮುಹೂರ್ತ ಫಿಕ್ಸ್' (Zilla Panchayath | Taluk Panchayath | BJP | Congress | JDS)
Bookmark and Share Feedback Print
 
ರಾಜ್ಯ ರಾಜಕಾರಣದಲ್ಲಿನ ಭೂ ಹಗರಣದ ಆರೋಪ-ಪ್ರತ್ಯಾರೋಪದ ನಡುವೆಯೇ ಜಿಲ್ಲಾ ಪಂಚಾಯ್ತಿ ಮತ್ತು ತಾಲೂಕು ಪಂಚಾಯ್ತಿ ಚುನಾವಣೆಯನ್ನು ಎರಡು ಹಂತದಲ್ಲಿ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದ್ದು, ಚುನಾವಣಾ ವೇಳಾಪಟ್ಟಿಯನ್ನು ಸೋಮವಾರ ಪ್ರಕಟಿಸಿದೆ.

ಡಿಸೆಂಬರ್ 26ರಂದು ಮೊದಲ ಹಂತದ ಮತದಾನ, ಡಿ.31ರಂದು ಎರಡನೇ ಹಂತದ ಮತದಾನ ನಡೆಯಲಿದ್ದು, 2011ರ ಜನವರಿ 4ರಂದು ಮತ ಎಣಿಕೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯುಕ್ತ ಸಿ.ಆರ್.ಚಿಕ್ಕಮಠ್ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ ತಿಳಿಸಿದ್ದಾರೆ.

ಈ ನಿಟ್ಟಿನಲ್ಲಿ ಇಂದು ಮಧ್ಯರಾತ್ರಿಯಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ. 3 ಜಿಲ್ಲೆಗಳಲ್ಲಿ ಕೋರ್ಟ್ ತಡೆಯಾಜ್ಞೆ (ಹೈಕೋರ್ಟ್ ತೀರ್ಪಿನ ನಂತರ ದಿನಾಂಕ ನಿಗದಿ) ಇರುವ ಹಿನ್ನೆಲೆಯಲ್ಲಿ ಹಾವೇರಿ, ಗದಗ ಮತ್ತು ದಾವಣಗೆರೆಯಲ್ಲಿ ಜಿಲ್ಲಾ ಪಂಚಾಯ್ತಿ ಚುನಾವಣೆ ನಡೆಯುವುದಿಲ್ಲ. ಆದರೆ ತಾಲೂಕು ಪಂಚಾಯ್ತಿ ಚುನಾವಣೆ ನಡೆಯಲಿದೆ ಎಂದು ಮಠ್ ವಿವರಿಸಿದ್ದಾರೆ.

ಮೊದಲ ಹಂತದಲ್ಲಿ 479 ಜಿಲ್ಲಾ ಪಂಚಾಯ್ತಿ ಹಾಗೂ 1728 ತಾಲೂಕು ಪಂಚಾಯ್ತಿ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಎರಡನೇ ಹಂತದಲ್ಲಿ 435 ಜಿಲ್ಲಾ ಪಂಚಾಯ್ತಿ ಮತ್ತು 1728 ತಾಲೂಕು ಪಂಚಾಯ್ತಿ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಮೊದಲ ಹಂತದಲ್ಲಿ 15 ಜಿಲ್ಲೆಗಳಲ್ಲಿ ಚುನಾವಣೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ದಾವಣಗೆರೆ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ತುಮಕೂರು, ಬೀದರ್, ಕೊಪ್ಪಳ, ಬಳ್ಳಾರಿ, ರಾಯಚೂರು, ಗುಲ್ಬರ್ಗ, ಯಾದಗಿರಿ ಕ್ಷೇತ್ರದಲ್ಲಿ ನಡೆಯಲಿದೆ.

ಎರಡನೇ ಹಂತದಲ್ಲಿ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಹಾಸನ, ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಳಗಾವಿ, ಬಿಜಾಪುರ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡದಲ್ಲಿ ಚುನಾವಣೆ ನಡೆಯಲಿದೆ.
ಸಂಬಂಧಿತ ಮಾಹಿತಿ ಹುಡುಕಿ