ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಿಜೆಪಿ ಸರಕಾರ ತೊಲಗಬೇಕು: ಮಲ್ಲಿಕಾರ್ಜುನ ಖರ್ಗೆ (BJP | Congress | Mallikarjun Kharge | Ambedkar | KPCC)
Bookmark and Share Feedback Print
 
ಜಾತಿವಾದ ಮತ್ತು ಧರ್ಮದ ಹೆಸರಲ್ಲಿ ರಾಜಕೀಯ ಮಾಡುತ್ತಿರುವ ರಾಜ್ಯದ ಬಿಜೆಪಿ ಸರಕಾರ ತೊಲಗಬೇಕು ಎಂದು ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಅಂಬೇಡ್ಕರ್ ಪರಿನಿರ್ವಾಣ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರಕಾರ ಧರ್ಮ ಮತ್ತು ಜಾತಿಗಳ ಹೆಸರಲ್ಲಿ ರಾಜಕಾರಣ ಮಾಡುತ್ತಿದ್ದು, ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದೆ. ಹೀಗಾಗಿ ಈ ಸರಕಾರವನ್ನು ಗದ್ದುಗೆಯಿಂದ ಕೆಳಗೆ ಇಳಿಸಲು ಕಾಂಗ್ರೆಸ್ ಕಾರ್ಯಕರ್ತರು ಶ್ರಮಿಸಬೇಕೆಂದು ಕರೆ ನೀಡಿದರು.

ಈ ಹಿಂದೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಬಲವಾಗಿತ್ತು. ಹಿಂದಿನ ನಾಯಕರು ಪಕ್ಷಕ್ಕೆ ಭದ್ರವಾದ ಬೇರುಗಳನ್ನು ಹಾಕಿದ್ದರು. ಅವು ಈಗ ಕ್ಷೀಣವಾಗುತ್ತಿದೆ. ಮತ್ತೆ ಅದನ್ನು ಬಲಪಡಿಸಲು ಎಲ್ಲರೂ ಸೇರಿ ಶ್ರಮಿಸಬೇಕು ಎಂದರು.

ಕೇಂದ್ರ ಸರಕಾರ ದೇಶದ ಶೇ.75ರಷ್ಟು ಜನರಿಗೆ ಆಹಾರ ಭದ್ರತೆ ಒದಗಿಸುವ ಚಿಂತನೆ ನಡೆಸುತ್ತಿದೆ ಮತ್ತು ಕಡ್ಡಾಯ ಶಿಕ್ಷಣ ನೀಡಲು ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದು ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ