ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ನಾವು ಅಧಿಕಾರಕ್ಕೆ ಬಂದರೆ ಯಡಿಯೂರಪ್ಪ ಜೈಲಿಗೆ: ಸಿದ್ದು (Sidharamaih | Yeddyurappa | Karnataka | Congress)
Bookmark and Share Feedback Print
 
ಭೂ ಹಗರಣದಲ್ಲಿ ಸಿಕ್ಕಿ ಒದ್ದಾಡುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈಗ ತಪ್ಪಿಸಿಕೊಳ್ಳಬಹುದು. ಆದರೆ ಮುಂದೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿರುವ ಕಾಂಗ್ರೆಸ್ ಸರಕಾರದಿಂದ ತಪ್ಪಿಸಿಕೊಳ್ಳಲು ಅವರಿಂದಾಗದು. ನಾವು ನಿಷ್ಪಕ್ಷಪಾತ ತನಿಖೆ ನಡೆಸಿ ಅವರನ್ನು ಜೈಲಿಗೆ ಕಳುಹಿಸುತ್ತೇವೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹಾಸನದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡುತ್ತಿದ್ದ ಅವರು, ಬಿಜೆಪಿ ಸರಕಾರ ಶೀಘ್ರದಲ್ಲೇ ಪತನಗೊಳ್ಳಲಿದೆ. ಅದು ಅಲ್ಪಮತದ ಸರಕಾರ. ಕೇವಲ ತಾಂತ್ರಿಕ ಆಧಾರದಲ್ಲಿ ಅದು ನಿಂತಿದೆ. ಅನರ್ಹಗೊಂಡ ಶಾಸಕರ ಪರವಾಗಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದರೆ ಸರಕಾರ ಪತನ ಖಚಿತ ಎಂದು ಭವಿಷ್ಯ ನುಡಿದರು.

ಈಗ ಅವರದ್ದೇ ಸರಕಾರವಿದೆ ಎಂಬ ಹಮ್ಮಿನಲ್ಲಿ ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ತನಗೆ ಬೇಕಾದಂತೆ ತನಿಖೆಗಳನ್ನು ನಡೆಸುತ್ತಿದ್ದಾರೆ. ಆದರೆ ಇದು ತುಂಬಾ ದಿನ ಮುಂದುವರಿಯದು. ಬಿಜೆಪಿ ಸರಕಾರ ಪತನವಾದ ನಂತರ ನಡೆಯುವ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ. ಈ ವಿಚಾರದಲ್ಲಿ ಯಾವುದೇ ಸಂಶಯವಿಲ್ಲ. ಆಗ ಅವರನ್ನು ಕಾಂಗ್ರೆಸ್ ಜೈಲಿಗೆ ಕಳುಹಿಸದೆ ಬಿಡುವುದಿಲ್ಲ ಎಂದು ಶಪಥ ಮಾಡಿದರು.

ಪ್ರತಿಪಕ್ಷದ ನಾಯಕರುಗಳನ್ನು ಜೈಲಿಗೆ ಅಟ್ಟಲು ಹೊಸ ಕಾರಾಗೃಹ ಕಟ್ಟಿಸುವುದಾಗಿ ಹೇಳಿರುವ ಮುಖ್ಯಮಂತ್ರಿಗಳು, ಅವರು ಮತ್ತು ಅವರ ಕುಟುಂಬದ ಹಗರಣದ ಬಗ್ಗೆ ಲೋಕಾಯುಕ್ತ ತನಿಖೆ ನಡೆಸಿದರೆ ಅವರೇ ಮೊದಲು ಜೈಲಿಗೆ ಹೋಗುತ್ತಾರೆ ಎಂದು ಲೇವಡಿ ಮಾಡಿದರು.

ಹಿಂದುಳಿದವರಿಗೆ, ಅಲ್ಪಸಂಖ್ಯಾತರಿಗೆ ಮೀಸಲಾತಿ ಒದಗಿಸುವ ಮಾತು ಬಂದಾಗಲೆಲ್ಲ ಬಿಜೆಪಿ ಅದನ್ನು ವಿರೋಧಿಸಿದೆ. ಇದು ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳಲ್ಲೂ ಮುಂದುವರಿದಿದೆ. ಜನರಿಗೆ ನಿಜವಾಗಿಯೂ ಸ್ವಾಭಿಮಾನ ಇದ್ದಿದ್ದೇ ಆದಲ್ಲಿ ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿಗಳಿಗೆ ತಕ್ಕ ಪಾಠ ಕಲಿಸಬೇಕು ಎಂದು ಸಿದ್ದರಾಮಯ್ಯ ಕರೆ ನೀಡಿದರು.
ಸಂಬಂಧಿತ ಮಾಹಿತಿ ಹುಡುಕಿ