ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಭೂ ಹಗರಣದಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆ: ಸುರೇಶ್ ಕುಮಾರ್ (Land Scam | Suresh kumar | Mysore | BJP | Yeddyurappa)
Bookmark and Share Feedback Print
 
ಭೂಹಗರಣದ ಸುದ್ದಿಗಳಿಂದ ಬಿಜೆಪಿ ವರ್ಚಸ್ಸು ಕುಸಿದಿದೆ ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಎಸ್.ಸುರೇಶ್ ಕುಮಾರ್ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಪೊಲೀಸ್ ಅಕಾಡೆಮಿಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಭೂ ಹಗರಣಗಳ ಸುದ್ದಿಯಿಂದ ಕಾರ್ಯಕರ್ತರಿಗೂ ನೋವಾಗಿದೆ. ಸಂಚಾರ ನಿಯಮದಂತೆ ಇಡೀ ಭೂಹಗರಣದ ಆರೋಪಗಳು ಹಿಟ್ ಅಂಡ್ ರನ್ ಕೇಸ್‌ನಂತಿದೆ. ಇಂಥ ಅಗ್ನಿಪರೀಕ್ಷೆಯಿಂದ ಹೊರ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯಪಾಲರ ಆರೋಪಗಳ ಬಗ್ಗೆ ಪ್ರತಿಕ್ರಿಯಿಸುವಷ್ಟು ದೊಡ್ಡವನಲ್ಲ. ಅವರು ನುರಿತ ರಾಜಕೀಯ ನಾಯಕರು. ಅವರ ಕೆಲಸಗಳನ್ನು ಮಾಡುತ್ತಿದ್ದಾರೆ. ಆದರೆ ಸರಕಾರ ಹೇಗೆ ನಡೆದುಕೊಳ್ಳಬೇಕು ಎನ್ನುವುದು ನಮಗೆ ಗೊತ್ತಿದೆ ಎಂದು ಪರೋಕ್ಷವಾಗಿ ಟೀಕಿಸಿದರು.

ಹಗರಣಗಳ ತನಿಖೆಯನ್ನು ನ್ಯಾಯಾಧೀಶರಿಗೆ ಒಪ್ಪಿಸಲಾಗಿದೆ. ಈ ಬಗ್ಗೆ ಲೋಕಾಯುಕ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರೊಂದಿಗೆ ಮಾತುಕತೆ ನಡೆಸುತ್ತೇನೆ ಎಂದ ಅವರು, ಭೈರಪ್ಪ ಅವರ ಹೇಳಿಕೆ ಕುರಿತಂತೆ ಅವರು ತಮ್ಮ ಅಭಿಪ್ರಾಯ ಹೇಳಿದ್ದಾರೆ. ಆದರೆ ಕೇಂದ್ರ ಸಚಿವ ವೀರಪ್ಪ ಮೊಯಿಲಿ ಅವರು ಹೇಳಿಕೆಯಲ್ಲಿ ಬಿಜೆಪಿ ಹುಳುಕು ಹುಡುಕುವ ಕೆಲಸ ಮಾಡುತ್ತಿದ್ದಾರೆ. ಮೊಯಿಲಿ ಅವರು ಸಾಹಿತಿಯಾಗಿ ಪ್ರತಿಕ್ರಿಯಿಸಿದ್ದರೆ ನಾವು ಸುಮ್ಮನಿರುತ್ತಿದ್ದೆವು. ಆದರೆ ಬಿಜೆಪಿಯನ್ನೇ ಗುರಿಯಾಗಿಟ್ಟುಕೊಂಡು ಮಾತನಾಡಿರುವುದು ಸರಿಯಲ್ಲ ಎಂದು ಆರೋಪಿಸಿದರು.
ಸಂಬಂಧಿತ ಮಾಹಿತಿ ಹುಡುಕಿ