ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಗ್ರಾಮಕ್ಕೆ ಕಾಲಿಡಲ್ಲ-ಜನರನ್ನು ಹೆದರಿಸುವ ಮುಖ್ಯಮಂತ್ರಿ: ಪರಮೇಶ್ವರ್ (Parameshwar | BJP | Yeddyurappa | KPCC | Bangalore)
Bookmark and Share Feedback Print
 
ಬಿಜೆಪಿ ಅಭ್ಯರ್ಥಿ ಸೋತ ಗ್ರಾಮಕ್ಕೆ ಕಾಲಿಡಲ್ಲ, ಮತ ನೀಡಿದರೆ ಮಾತ್ರ ಗ್ರಾಮಕ್ಕೆ ಭೇಟಿ ನೀಡುವುದಾಗಿ ಹೇಳುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ವಾಧಿಕಾರಿ ಧೋರಣೆ ನೀತಿ ಅನುಸರಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಜೆ.ಪರಮೇಶ್ವರ್ ಆರೋಪಿಸಿದ್ದಾರೆ.

ಕೆಪಿಸಿಸಿಯಲ್ಲಿ ಶುಕ್ರವಾರ ಮಾನವ ಹಕ್ಕುಗಳ ಘಟಕ ಹಮ್ಮಿಕೊಂಡಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮುಖ್ಯಮಂತ್ರಿ ಜನರನ್ನು ಈ ರೀತಿ ಹೆದರಿಸುವುದು ನೋಡಿದರೆ, ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿದ್ದೇವೆಯೇ ಎಂಬ ಪ್ರಶ್ನೆ ಮೂಡುತ್ತಿದೆ ಎಂದರು.

ನಾವು ಇಂದು 21ನೇ ಶತಮಾನದಲ್ಲಿದ್ದರೂ ಮಾನವ ಹಕ್ಕು ಉಲ್ಲಂಘನೆಯಾಗುತ್ತಿರುವುದು ನಿಜಕ್ಕೂ ಖೇದಕರ ಸಂಗತಿ ಎಂದು ಅಸಮಾಧಾನ ವ್ಯಕ್ತಪಡಿಸಿದ ಪರಮೇಶ್ವರ್, ಕಾನೂನಿನ ಮೂಲಕವೇ ಮಾನವ ಹಕ್ಕುಗಳನ್ನು ರಕ್ಷಿಸಬೇಕು. ಇದಕ್ಕಾಗಿ ಪ್ರಬಲ ಕಾನೂನು ರಚನೆಯಾಗಬೇಕೆಂದು ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ