ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಪಂಚಾಯ್ತಿ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ: ಬೊಮ್ಮಾಯಿ (BJP | Yeddyurappa | Congress | JDS | Bommai)
Bookmark and Share Feedback Print
 
ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಬೇಕು ಎಂದು ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಪಕ್ಷದ ಕಾರ್ಯಕರ್ತರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಈ ಚುನಾವಣೆಯಲ್ಲಿ ಪಕ್ಷಕ್ಕೆ ಬಹುಮತ ಬಂದಲ್ಲಿ ಬಿಜೆಪಿಯನ್ನು ತಡೆಯಲು ಯಾವ ಶಕ್ತಿಯಿಂದಲೂ ಸಾಧ್ಯವಿಲ್ಲ. ಹೀಗಾಗಿ ಕಾರ್ಯಕರ್ತರು ಪ್ರಾಮಾಣಿಕತೆ, ನಿಷ್ಠೆಯಿಂದ ಕೆಲಸ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.

ಗುಲ್ಬರ್ಗ, ಬೀದರ್ ಮತ್ತು ಯಾದಗಿರಿ ಜಿಲ್ಲೆಗಳನ್ನೊಂಡ ಬಿಜೆಪಿ ವಿಭಾಗ ಮಟ್ಟದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಎರಡೂವರೆ ವರ್ಷದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ಅನೇಕ ಜನಪರ, ಅಭಿವೃದ್ಧಿ ಪರ ಕೆಲಸ ಮಾಡಿದ್ದಾರೆ. ಜನರಲ್ಲಿ ಈ ಕುರಿತು ಜಾಗೃತಿ ಮೂಡಿಸುವ ಕೆಲಸ ಆಗಬೇಕು ಎಂದರು.

ಪ್ರತಿಪಕ್ಷದವರು ಮಾಡುವ ಆರೋಪದಲ್ಲಿ ಹುರುಳಿಲ್ಲ. ಅದರಲ್ಲಿ ಯಾವ ಸತ್ಯಾಂಶವೂ ಇಲ್ಲ. ಇದನ್ನು ಎದುರಿಸಲು ಕಾರ್ಯಕರ್ತರು ಸ್ಪಷ್ಟತೆ ರೂಢಿಸಿಕೊಳ್ಳಬೇಕು. ಈ ಚುನಾವಣೆಯಲ್ಲಿ ಟಿಕೆಟ್ ಯಾರಿಗೆ ಸಿಗತ್ತೋ, ಬಿಡುತ್ತೋ ಅದರ ಗೋಜಿಗೆ ಹೋಗಬೇಡಿ. ನಿಷ್ಠಾವಂತ ಕಾರ್ಯಕರ್ತರನ್ನು ಪರಿಗಣನೆಗೆ ತೆಗೆದುಕೊಂಡು ಸೂಕ್ತ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಇಷ್ಟೊಂದು ವರ್ಷ ಅಧಿಕಾರ ನಡೆಸಿದೆ. ಆದರೆ ಯಾವುದೇ ಅಭಿವೃದ್ಧಿ ಕೆಲಸ ಆಗಲಿಲ್ಲ. ಆದರೆ ಬಿಜೆಪಿ ಸರಕಾರ ಬಂದ ನಂತರ ರಾಜ್ಯದಲ್ಲಿ ಬದಲಾವಣೆ ಗಾಳಿ ಬೀಸಿದೆ. ಹೀಗಾಗಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಜೆಡಿಎಸ್, ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಬೇಕು ಎಂದು ಕರೆ ನೀಡಿದರು.

ರಾಜಕೀಯ ದೃವೀಕರಣದೊಂದಿಗೆ ಸಾಮಾಜಿಕ ಸಮೀಕರಣ ಬೆರೆಸಿ ನಿರ್ಧಾರ ಕೈಗೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರ ಮೇಲೆ ಗುರುತರ ಜವಾಬ್ದಾರಿ ಇದೆ. ಈ ಚುನಾವಣೆಯನ್ನು ಲಘುವಾಗಿ ಪರಿಗಣಿಸಬಾರದು. ಈ ವಿಭಾಗದಲ್ಲಿ ಹೆಚ್ಚಿನ ಸ್ಥಾನ ಗೆಲ್ಲಿಸುವ ಮೂಲಕ ಈ ಭಾಗದ ಭವಿಷ್ಯ ರೂಪಗೊಳ್ಳಲಿದೆ ಎಂಬುದನ್ನು ಅರಿಯಬೇಕು ಎಂದರು.
ಸಂಬಂಧಿತ ಮಾಹಿತಿ ಹುಡುಕಿ