ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಿಜೆಪಿ ಜತೆ ಆಯೋಗ ಶಾಮೀಲಾಗಿದೆ: ಪರಮೇಶ್ವರ್ ಕಿಡಿ (BJP | Parameshwar | Mysore | KPCC | Congress | JDS)
Bookmark and Share Feedback Print
 
ಬಿಜೆಪಿ ಸರಕಾರ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡುತ್ತಿರುವುದು ಚುನಾವಣಾ ಆಯೋಗಕ್ಕೆ ತಿಳಿದಿದ್ದರೂ ಸಹ ಯಾವುದೇ ಕ್ರಮ ಕೈಗೊಳ್ಳದೇ ಸುಮ್ಮನಿರುವುದು ಅನುಮಾನಕ್ಕೆ ಎಡೆಮಾಡಿಕೊಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಆರೋಪಿಸಿದರು.

ಶನಿವಾರ ಪತ್ರಕರ್ತರ ಭವನದಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇತ್ತೀಚೆಗೆ ಸಮಾರಂಭವೊಂದರಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ವಿ.ಸೋಮಣ್ಣ ಅವರು ಪ್ರತಿಯೊಬ್ಬರಿಗೆ 15 ಕೆ.ಜಿ.ಅಕ್ಕಿ ನೀಡುವುದಾಗಿ ಘೋಷಿಸಿದ್ದಾರೆ. ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ. ಈ ವಿಷಯ ಆಯೋಗಕ್ಕೆ ಗೊತ್ತಿದ್ದರೂ ಸುಮ್ಮನಿರುವುದು ಎಷ್ಟು ಸಮಂಜಸ ಎಂದು ಪ್ರಶ್ನಿಸಿದರು.

ಹಾಗಾಗಿ ಚುನಾವಣಾ ಆಯೋಗ ಬಿಜೆಪಿ ಜತೆ ಶಾಮೀಲಾಗಿದೆ ಎಂಬ ಶಂಕೆ ಮೂಡುತ್ತಿದೆ ಎಂದರು. ಅಲ್ಲದೇ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಚುನಾವಣೆಯಲ್ಲಿ ಕಾಂಗ್ರೆಸ್ ಯಾವ ಪಕ್ಷದ ಜೊತೆಯೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ಈ ಸಂಬಂಧ ವರಿಷ್ಠರು ಈಗಾಗಲೇ ತೀರ್ಮಾನ ಕೈಗೊಂಡಿದ್ದರು ಎಂದು ತಿಳಿಸಿದರು.

ಈ ಚುನಾವಣೆಯಲ್ಲಿ ಬಿಜೆಪಿ ಹಣ, ಹೆಂಡವನ್ನು ಯಥೇಚ್ಛವಾಗಿ ಹಂಚುವುದು ಖಚಿತ. ಈ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಎಚ್ಚರ ವಹಿಸಿ ತಡೆಗಟ್ಟುವಂತೆ ಸೂಚಿಸಲಾಗುವುದು ಎಂದ ಅವರು, ಚುನಾವಣೆಯಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನ ಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಂಬಂಧಿತ ಮಾಹಿತಿ ಹುಡುಕಿ